×
Ad

ಮಧ್ಯಪ್ರದೇಶ: ಸೇತುವೆಯಿಂದ ಬಿದ್ದ ಬಸ್; ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿಕೆ

Update: 2023-05-09 11:17 IST

ಭೋಪಾಲ್: ಮಧ್ಯಪ್ರದೇಶದ ಖಾರ್ಗೋನ್‌ನಲ್ಲಿ ಮಂಗಳವಾರ ಬಸ್ಸೊಂದು  ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ  ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.  ಹಲವರು ಗಾಯಗೊಂಡಿದ್ದಾರೆ ಎಂದು ರಾಜ್ಯ ಗೃಹ ಸಚಿವ ನರೋತ್ತಮ್ ಮಿಶ್ರಾ ಹೇಳಿದ್ದಾರೆ.

50 ಜನರಿದ್ದ ಬಸ್ ಇಂದೋರ್‌ಗೆ ತೆರಳುತ್ತಿದ್ದಾಗ ಖಾರ್ಗೋನ್‌ನ ದಸಂಗ ಗ್ರಾಮದಲ್ಲಿ ಸೇತುವೆಯಿಂದ ಕೆಳಗೆ ಬಿದ್ದಿದೆ. ಸ್ಥಳೀಯ ಗ್ರಾಮಸ್ಥರ ಸಹಾಯದಿಂದ ತುರ್ತು ಸೇವೆಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಮಿಶ್ರಾ ಹೇಳಿದರು.

ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ  4 ಲಕ್ಷ  ರೂ. ಗಂಭೀರವಾಗಿ ಗಾಯಗೊಂಡವರಿಗೆ  50,000  ರೂ. ಹಾಗೂ ಸಣ್ಣಪುಟ್ಟ ಗಾಯಗೊಂಡವರಿಗೆ  25,000 ರೂ.  ಪರಿಹಾರ ನೀಡುವುದಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಘೋಷಿಸಿದ್ದಾರೆ

 ಮುಖ್ಯಮಂತ್ರಿ ಚೌಹಾಣ್ ಅವರ ಸರಕಾರವು ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸಹ ಭರಿಸಲಿದೆ.

ಮೃತರ ಕುಟುಂಬಗಳಿಗೆ ತಲಾ  2 ಲಕ್ಷ ರೂ. ಪರಿಹಾರ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಕಚೇರಿ ಇಂದು ಪ್ರಕಟಿಸಿದೆ.

Similar News