×
Ad

ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದ ಬೆನ್ನಲ್ಲೇ ಟ್ವಿಟರ್ ನಲ್ಲಿ #ByeByeBJP ಹ್ಯಾಶ್ ಟ್ಯಾಗ್ ಟ್ರೆಂಡ್

Update: 2023-05-09 11:58 IST

ಬೆಂಗಳೂರು: ತೀವ್ರ ಪೈಪೋಟಿ ಸೃಷ್ಟಿಸಿರುವ ರಾಜ್ಯ ವಿಧಾಸನಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಸೋಮವಾರ ಸಂಜೆ ತೆರೆ ಬಿದ್ದಿದ್ದು, ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಪ್ರಚಾರ ಮಾಡಲು ಮಾತ್ರ ಚುನಾವಣಾ ಆಯೋಗ ಅವಕಾಶ ಕಲ್ಪಿಸಿದೆ.

ಇದರ ಬೆನ್ನಲ್ಲೇ ವಿವಿಧ ಪಕ್ಷಗಳ ಅಭ್ಯರ್ಥಿಗಳು ಸಾಮಾಜಿಕ ಜಾಲತಾಣಗಳ ಮೊರೆ ಹೋಗಿದ್ದಾರೆ.

ರಾಜ್ಯ ಕಾಂಗ್ರೆಸ್‌ ಘಟಕ, ತಮಿಳುನಾಡು ಕಾಂಗ್ರೆಸ್, ಭಾರತೀಯ ಯುವ ಕಾಂಗ್ರೆಸ್ ನಾಯಕರು, ವಕ್ತಾರರು #ByeByeBJP ಹ್ಯಾಶ್ ಟ್ಯಾಗ್ ನಡಿಯಲ್ಲಿ ಟ್ವಿಟರ್ ಅಭಿಯಾನ ನಡೆಸುತ್ತಿದ್ದು, ಸದ್ಯ ಟ್ರೆಂಡ್ ಆಗಿದೆ. 'No vote to 40% commission sarkara!' ಎಂಬ ಶಿರ್ಷಿಕೆಯುಳ್ಳ ವಿಡಿಯೋ ಹಂಚಿಕೊಂಡಿರುವ ಕಾಂಗ್ರೆಸ್ 'ಬಿಜೆಪಿ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳು, ಕಾರ್ಮಿಕರು, ಮಹಿಳೆಯರ ಧ್ವನಿ' ಎಂದು ಬರೆದುಕೊಂಡಿದೆ.

ಅಲ್ಲದೇ, ರಾಜ್ಯ ಸರಕಾರ ಹಾಗೂ ಕೇಂದ್ರ ಸರಕಾರಗಳ ವೈಫಲ್ಯಗಳನ್ನು ಸಾರುವ ವಿಡಿಯೊ, ಪತ್ರಿಕಾ ವರದಿ, ವ್ಯಂಗ್ಯಚಿತ್ರಗಳಿರುವ ಪೋಸ್ಟ್ ಗಳು ಹರಿದಾಡುತ್ತಿವೆ. 

Similar News