×
Ad

ಎಸೆಸೆಲ್ಸಿ ಪರೀಕ್ಷೆ: ಕೃಷ್ಣಾಪುರದ ಅಲ್ ಬದ್ರಿಯಾ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಉತ್ತಮ ಫಲಿತಾಂಶ

Update: 2023-05-09 12:15 IST

ಮಂಗಳೂರು, ಮೇ 9: ಕೃಷ್ಣಾಪುರದ ಅಲ್ ಬದ್ರಿಯಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಪ್ರಸಕ್ತ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ 98.98 ಶೇ. ಫಲಿತಾಂಶ ದಾಖಲಿಸಿದೆ.

ಒಟ್ಟು 98 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಈ ಪೈಕಿ 6 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 18 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ, 40 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

 ಮುಹಮ್ಮದ್ ಸುಹೈಲ್ 615 (98.4ಶೇ.) ಅಂಕಗಳನ್ನು ಗಳಿಸಿ ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಉಳಿದಂತೆ ಆಯಿಶ ಝುಲ್ಫಾ 584 (93.44 ಶೇ), ಇಫ್ಝಾ ಹಲೀಮಾ 582(93.12 ಶೇ.), ಆಯಿಶತುಲ್ ನಿಹಾಲ್ 571(91.36 ಶೇ.), ಮುಹಮ್ಮದ್ ಹಫೀಲ್ 566(90.56 ಶೇ.), ಸೋಹಾ ಝುಲೇಖಾ 565 (90.4 ಶೇ.) ಅಂಕಗಳನ್ನು ಗಳಿಸುವ ಮೂಲಕ ಶಾಲೆಗೆ ಟಾಪರ್ ಆಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Similar News