×
Ad

ನಾಳೆ ಮತದಾನ: ಪ್ರಸಿದ್ಧ ಪ್ರವಾಸಿ ತಾಣಗಳಿಗೆ ನಿರ್ಬಂಧ

Update: 2023-05-09 12:28 IST

ಬೆಂಗಳೂರು:  ರಾಜ್ಯ ವಿಧಾನ ಸಭೆಯ ಚುನಾವಣೆಯ ಹಿನ್ನಲೆಯಲ್ಲಿ  ಮೇ 10ರಂದು ಮತದಾನ ಇರುವುದರಿಂದ ಕೆಲ ಪ್ರಮುಖ ಪ್ರವಾಸಿ ತಾಣಗಳಿಗೆ ಮತದಾನದ ದಿನದಂದು ನಿರ್ಬಂಧ ಹೇರಲಾಗಿದೆ. 

ಶಿವಮೊಗ್ಗ ಜಿಲ್ಲೆಯ ಪ್ರವಾಸಿ ತಾಣ ವಿಶ್ವ ವಿಖ್ಯಾತ ಜೋಗ ಜಲಪಾತದಲ್ಲಿ ಪ್ರವಾಸಿಗರಿಗೆ ಪ್ರವೇಶ ನಿಷೇಧಿಸಿ ಜಿಲ್ಲಾಡಳಿತ ಈಗಾಗಲೇ ಆದೇಶ ಹೊರಡಿಸಿದೆ.

ಮತದಾನದಿಂದ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರದೆ ಇದ್ದರೆ ಬರುವ ಪ್ರವಾಸಿಗರಿಗಾಗಿ ನಿರ್ವಹಣಾ ಪ್ರಾಧಿಕಾರ ಸಿಬ್ಬಂದಿ ಕರ್ತವ್ಯಪಾಲನೆ ಮಾಡಬೇಕಾಗುತ್ತದೆ. ಇವರಿಗೆ ಪೂರಕವಾಗಿ ಸ್ಥಳೀಯವಾಗಿರುವ ವ್ಯಾಪಾರಸ್ಥರು, ಛಾಯಚಿತ್ರಗಾರರು, ಬೀದಿ ಬದಿ ವ್ಯಾಪಾರಿಗಳು, ಗೈಡ್‌ಗಳು, ಆಟೋಚಾಲಕರು, ಟ್ಯಾಕ್ಸಿ ಚಾಲಕರು ಭದ್ರತಾ ಸಿಬ್ಬಂದಿ ಸೇರಿದಂತೆ ಅನೇಕರು ಮತದಾನದಿಂದ ಹೊರಗುಳಿಯುವ ಸಾಧ್ಯತೆ ಇದೆ. ಈ ಹಿಂದೆ ಮತದಾನ ದಿನಗಳಂದು ಜೋಗ ನಿರ್ವಹಣಾ ಪ್ರಾಧಿಕಾರದಲ್ಲಿ ದಾಖಲಾದ ಪ್ರವಾಸಿಗರ ಸಂಖ್ಯೆ ಅಂಕಿ ಅಂಶಗಳನ್ನು ಪರಿಗಣಿಸಿ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ನಂದಿಗಿರಿಧಾಮ ಬಂದ್ 

ಮೇ 10ರ ಮುಂಜಾನೆ 5ರಿಂದ ರಾತ್ರಿ 8 ಗಂಟೆವರೆಗೆ ನಂದಿಗಿರಿಧಾಮ ಬಂದ್ ಮಾಡಿ ಚಿಕ್ಕಬಳ್ಳಾಪುರ ಡಿಸಿ ನಾಗರಾಜ್​​ ಆದೇಶ ಹೊರಡಿಸಿದ್ದಾರೆ. 

ಬನ್ನೇರುಘಟ್ಟ ಪಾರ್ಕ್ ಗೂ ಇಲ್ಲ ಪ್ರವೇಶ

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಪಾರ್ಕ್ ನಾಳೆ ಮತದಾನ ದಿನವಾದ ಹಿನ್ನೆಲೆ ಬಂದ್ ಮಾಡಲಾಗುತ್ತೆ. .

Similar News