×
Ad

ಎಸೆಸೆಲ್ಸಿಯಲ್ಲಿ ಉತ್ತಮ ಫಲಿತಾಂಶ: MEIF ಅಭಿನಂದನೆ

Update: 2023-05-09 13:33 IST

ಮಂಗಳೂರು, ಮೇ 9: ಪ್ರಸಕ್ತ (2023ನೇ) ಸಾಲಿನ ಎಸೆಸೆಲ್ಸಿ ಫಲಿತಾಂಶವು ಕಳೆದ ವರ್ಷಕ್ಕಿಂತ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಅದರಲ್ಲೂ 100 ಶೇ. ಫಲಿತಾಂಶ ಪಡೆದಿರುವ ವಿದ್ಯಾ ಸಂಸ್ಥೆಗಳ ಹಾಗೂ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಸಂಖ್ಯೆಯು ನಿರೀಕ್ಷೆಗೂ ಮೀರಿ ಏರಿಕೆಯಾಗಿರುವುದು ಸಂತಸ ತಂದಿದೆ ಎಂದು ದ.ಕ. ಮತ್ತು ಉಡುಪಿ ಜಿಲ್ಲಾ ಮುಸ್ಲಿಮ್ ಶಿಕ್ಷಣ ಸಂಸ್ಥೆಗಳ ಒಕ್ಕೂಟ (MEIF) ತಿಳಿಸಿದೆ.

ಈ ಶೈಕ್ಷಣಿಕ ಸಾಲಿನಲ್ಲಿ ಆಯಾ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಗಳ ಪ್ರಯತ್ನದ ಜೊತೆಗೆ MEIF ಕೂಡಾ ದ.ಕ. ಮತ್ತು ಉಡುಪಿ ಜಿಲ್ಲೆಗಳ ಆರು ಕೇಂದ್ರಗಳಲ್ಲಿ 1,900 (ಒಟ್ಟು 2441  ವಿದ್ಯಾರ್ಥಿಗಳ ಪೈಕಿ)  ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮಗಳನ್ನು ಸಂಘಟಿಸಿತ್ತು. ತರಬೇತಿ ಕಾರ್ಯಕ್ರಮಗಳ ಪ್ರಾಯೋಜಕತ್ವವನ್ನು ನೀಡಿ ಸಹಕರಿಸಿದ ಎಲ್ಲಾ ವಿದ್ಯಾ ಸಂಸ್ಥೆಗಳಿಗೆ ಅಭಾರಿಯಾಗಿದೆ. ಉತ್ತಮ ಫಲಿತಾಂಶ ಪಡೆಯಲು ಶ್ರಮಿಸಿದ ಆಡಳಿತ ಮಂಡಳಿ, ಶಿಕ್ಷಕರು, ತರಬೇತಿ ನೀಡಿದ ರಾಷ್ಟ್ರೀಯ ತರಬೇತುದಾರ ಪ್ರೊ.ರಾಜೇಂದ್ರ ಭಟ್ ಮತ್ತು ವಿದ್ಯಾರ್ಥಿಗಳಿಗೆ ಅಭಿನಂದನೆಗಳು ಎಂದು MEIF ಗೌರವಾಧ್ಯಕ್ಷ ಉಮರ್ ಟೀಕೆ, ಅಧ್ಯಕ್ಷ ಮೂಸಬ್ಬ ಪಿ ಬ್ಯಾರಿ ಹಾಗೂ ಪ್ರಧಾನ ಕಾರ್ಯದರ್ಶಿ ಬಿ.ಎ.ನಝೀರ್ ತಿಳಿಸಿದ್ದಾರೆ.

SSLC  ಮತ್ತು PUCಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಶೀಘ್ರದಲ್ಲಿ ಪ್ರತಿಭಾ ಪುರಸ್ಕಾರವನ್ನು MEIF ಆಯೋಜಿಸಲಿದೆ ಎಂದವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Similar News