×
Ad

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನ: ವರದಿ

Update: 2023-05-09 15:15 IST

 ಕರಾಚಿ: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಇಸ್ಲಾಮಾಬಾದ್ ಹೈಕೋರ್ಟ್‌ನ ಹೊರಗೆ ಬಂಧಿಸಲಾಗಿದೆ ಎಂದು ಸುದ್ದಿ ಸಂಸ್ಥೆ ANI ಸ್ಥಳೀಯ ಮಾಧ್ಯಮವನ್ನು ಉಲ್ಲೇಖಿಸಿ ವರದಿ ಮಾಡಿದೆ.

ಇಮ್ರಾನ್ ಖಾನ್ ಅವರನ್ನು ಅರೆಸೇನಾ ಪಡೆಗಳು ವಶಕ್ಕೆ ಪಡೆದಿವೆ ಎಂದು ಸ್ಥಳೀಯ ಜಿಯೋ ಟಿವಿ ಮಂಗಳವಾರ ವರದಿ ಮಾಡಿದೆ.

ಭ್ರಷ್ಟಾಚಾರ ಪ್ರಕರಣದಲ್ಲಿ ಇಸ್ಲಾಮಾಬಾದ್‌ನ ನ್ಯಾಯಾಲಯದ ಆವರಣದಿಂದ ಖಾನ್ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಸುದ್ದಿವಾಹಿನಿ ವರದಿ ಮಾಡಿದೆ.

"ಇಮ್ರಾನ್ ಖಾನ್ ಅವರ ಕಾರನ್ನು ಸುತ್ತುವರಿಯಲಾಗಿದೆ" ಎಂದು ಬಂಧನವನ್ನು ಖಚಿತಪಡಿಸದ ಇಮ್ರಾನ್ ಖಾನ್ ಅವರ ಸಹಾಯಕ ಫವಾದ್ ಚೌಧರಿ ಹೇಳಿದರು.

Similar News