×
Ad

ವಿಧಾನಸಭಾ ಚುನಾವಣೆ: ಉಡುಪಿ ಜಿಲ್ಲೆಯ ಐದು ಕೇಂದ್ರಗಳಲ್ಲಿ ಮಸ್ಟರಿಂಗ್ ಪ್ರಕ್ರಿಯೆ ಆರಂಭ

Update: 2023-05-09 15:27 IST

ಉಡುಪಿ, ಮೇ 9: ವಿಧಾನಸಭಾ ಚುನಾವಣೆ ಪ್ರಯುಕ್ತ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಥಾಪಿಸಲಾದ ಮಸ್ಟರಿಂಗ್ ಕೇಂದ್ರಗಳಲ್ಲಿ ಇಂದು ಮಸ್ಟರಿಂಗ್ ಪ್ರಕ್ರಿಯೆ ನಡೆಯಿತು.

ಬೈಂದೂರು ಕ್ಷೇತ್ರದ ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜು, ಕುಂದಾಪುರ ಕ್ಷೇತ್ರದ ಕುಂದಾಪುರ ಭಂಡಾರ್‌ಕಾರ್ಸ್‌ ಸಾಯನ್ಸ್ ಆ್ಯಂಡ್ ಆರ್ಟ್ಸ್ ಕಾಲೇಜು, ಉಡುಪಿ ಕ್ಷೇತ್ರದ ಬ್ರಹ್ಮಗಿರಿ ಸೈಂಟ್ ಸಿಸಿಲೀಸ್ ಶಾಲೆ, ಕಾಪು ಕ್ಷೇತ್ರದ ಉಳಿಯಾರಗೋಳಿ ದಂಡತೀರ್ಥ ಪಿಯು ಕಾಲೇಜು ಹಾಗೂ ಕಾರ್ಕಳ ಕ್ಷೇತ್ರದ ಕಾರ್ಕಳ ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಮಸ್ಟರಿಂಗ್ ಕೇಂದ್ರಗಳಿಂದ ಮತಗಟ್ಟೆ ಅಧಿಕಾರಿಗಳು ತಮ್ಮ ತಂಡದೊಂದಿಗೆ ಮತಗಟ್ಟೆಗಳಿಗೆ ತೆರಳಿದರು.

ಮತಗಟ್ಟೆ ಅಧಿಕಾರಿಗಳು ಪೊಲೀಸ್ ಭದ್ರತೆ ಜೊತೆ ಮತಯಂತ್ರಗಳೊಂದಿಗೆ ತಮಗೆ ಸೂಚಿಸಿದ ಮಾರ್ಗಗಳ ಬಸ್‌ಗಳಲ್ಲಿ ಮತಗಟ್ಟೆಗಳಿಗೆ ತೆರಳಿದರು. ಆಯಾ ಕ್ಷೇತ್ರದ ತಾಲೂಕು ಚುನಾವಣಾಧಿಕಾರಿಗಳು ಮಸ್ಟರಿಂಗ್ ಕಾರ್ಯದ ನೇತೃತ್ವ ವನ್ನು ವಹಿಸಿದ್ದರು.

ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಹಾಗೂ ಎಸ್ಪಿ ಅಕ್ಷಯ್ ಹಾಕೇ ಮಚ್ಚೀಂದ್ರ ಉಡುಪಿ ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೆ ಜಿಲ್ಲಾಧಿಕಾರಿ ಬೈಂದೂರು, ಕುಂದಾಪುರ, ಕಾಪು ಕೇಂದ್ರ ಗಳಿಗೂ ತೆರಳಿ ಮಸ್ಟರಿಂಗ್ ಪ್ರಕ್ರಿಯೆಯನ್ನು ಪರಿಶೀಲಿಸಿದರು.

Similar News