ಅಳ್ವಾಸ್ ಕಾಲೇಜಿನಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ
ಮಂಗಳೂರು: ಮತದಾನ ಮಾಡುವುದು ನಾಗರಿಕರ ಮುಖ್ಯ ಜವಾಬ್ದಾರಿಯಾಗಿದೆ. ಇದು ನಮ್ಮ ಮೂಲಭೂತ ಹಕ್ಕುಗಳಲ್ಲಿ ಒಂದಾಗಿದೆ. ಚುನಾವಣೆಯು ಪ್ರಜಾಪ್ರಭುತ್ವದ ಬಹುದೊಡ್ಡ ಹಬ್ಬವೂ ಆಗಿದೆ. ಹಾಗಾಗಿ ಎಲ್ಲರೂ ಕಡ್ಡಾಯ ಮತದಾನ ಮತ್ತು ನೈತಿಕ ಮತದಾನಕ್ಕೆ ಒತ್ತು ನೀಡಬೇಕಾಗಿದೆ ಎಂದು ದ.ಕ. ಜಿಪಂ ಸಿಇಒ ಡಾ. ಕುಮಾರ ಹೇಳಿದರು.
ಮೂಡುಬಿದಿರೆ ಅಳ್ವಾಸ್ ಕಾಲೇಜಿನಲ್ಲಿ ನಡೆದ ಮತದಾರ ಜಾಗೃತಿ ಮತ್ತು ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
18 ವರ್ಷ ವಯಸ್ಸು ಮೇಲ್ಪಟ್ಟ ಎಲ್ಲರೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ಮತದಾನದ ದಿನವಾದ ಮೇ 10ರಂದು ತಪ್ಪದೆ ಮತ ಚಲಾಯಿಸಬೇಕು. ಯಾವುದೇ ಕಾರಣಕ್ಕೂ ಮತದಾನ ದಿಂದ ದೂರ ಉಳಿಯಬಾರದು. ದೇಶದ ಉಜ್ವಲ ಭವಿಷ್ಯಕ್ಕಾಗಿ ಎಲ್ಲರೂ ಮತದಾನ ಮಾಡಬೇಕು ಎಂದು ಡಾ.ಕುಮಾರ್ ಕರೆ ನೀಡಿದರು.
ಈ ವೇಳೆ ಗಿರೀಶ್ ನಾವಡ ಬಳಗದಿಂದ ಮತದಾನದ ಜವಾಬ್ದಾರಿಯ ಅರಿವು ಮೂಡಿಸುವ ಯಕ್ಷಗಾನ ಪ್ರದರ್ಶಿಸಲಾಯಿತು. ಈ ಸಂದರ್ಭ ಅಳ್ವಾಸ್‌ನ ಟ್ರಸ್ಟಿ ವಿವೇಕ್ ಅಳ್ವಾ, ಸ್ವೀಪ್ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.