ಚುನಾವಣಾ ಕರ್ತವ್ಯ ಲೋಪ: ಶೃಂಗೇರಿ ತಾ.ಪಂ ಇಒ ಅಮಾನತು

Update: 2023-05-09 13:34 GMT

ಚಿಕ್ಕಮಗಳೂರು, ಮೇ 9: ಶೃಂಗೇರಿ ತಾಲೂಕಿನ ತಾಪಂ ಇಒ ಪುಟ್ಟೇಗೌಡ ಅವರು ಚುನಾವಣಾ ಕೆಲಸಗಳನ್ನು ನಿರ್ವಹಿಸುವಲ್ಲಿ ನಿರ್ಲಕ್ಷ್ಯ ವಹಿಸಿ ಕರ್ತವ್ಯ ಲೋಪ ಎಸಗಿರುವುದಲ್ಲದೇ ಚುನಾವಣಾ ಕಾರ್ಯಕ್ಕೆ ತೊಂದರೆಯುಂಟು ಮಾಡಿರುವುದರಿಂದ ತಕ್ಷಣದಿಂದ ಜಾರಿಗೆ ಬರುವಂತೆ ಸರಕಾರಿ ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಬುಧವಾರ ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ -2023ಕ್ಕೆ ಸಂಬಂಧಿಸಿದಂತೆ ತಾಲೂಕು ಕಾರ್ಯ ನಿರ್ವಾಹಣಾಧಿಕಾರಿ ಪುಟ್ಟೇಗೌಡ ಅವರಿಗೆ ನಿಯೋಜಿಸಿದ್ದ ಕೆಲಸ ಕಾರ್ಯಗಳನ್ನು ಸರಿಯಾಗಿ ಮಾಡದೇ ಚುನಾವಣಾ ಕೆಲಸಗಳನ್ನು ನಿರ್ವಹಿಸುವಲ್ಲಿ ನಿರ್ಲಕ್ಷ್ಯ ವಹಿಸಿ ಕರ್ತವ್ಯ ಲೋಪ ಮಾಡಿದ್ದಾರೆ ಮತ್ತು ಮಹಿಳಾ ಸಿಬ್ಬಂದಿ ಮುಂದೆ ಅವಾಚ್ಯ ಮತ್ತು ತೀರಾ ಆಶ್ಲೀಲ ಪದಗಳನ್ನು ಬಳಸಿ ಸಿಬ್ಬಂದಿಗೆ ಮುಜುಗರವಾಗುವಂತೆ ಮನಬಂದಂತೆ ಮಾತನಾಡಿದ್ದು, ಚುನಾವಣಾ ಕಾರ್ಯಕ್ಕೆ ತೊಂದರೆಯುಂಟು ಮಾಡಿದ್ದರಿಂದ ಪ್ರಜಾಪ್ರಾತಿನಿಧ್ಯ ಕಾಯ್ದೆ 1951ರ ಕಲಂ 28 (ಎ) ಮತ್ತು 136ರಡಿಯಲ್ಲಿ ಇಲಾಖಾ ವಿಚಾರಣೆ ಕಾಯ್ದಿರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
 

Similar News