ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್ ಗೆಲ್ಲುತ್ತಾರೆ ಎಂದ ಬಿಜೆಪಿ ಸಂಸದೆ
Update: 2023-05-10 10:15 IST
ಬೆಳಗಾವಿ: 'ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಗದೀಶ ಶೆಟ್ಟರ್ ಗೆಲ್ಲುತ್ತಾರೆ' ಎಂದು ದಿವಂಗತ ಸಂಸದ ಸುರೇಶ್ ಅಂಗಡಿ ಪತ್ನಿ ಮಂಗಳಾ ಅಂಗಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅವರು ಬೆಳಗಾವಿಯ ವಿಶ್ವೇಶ್ವರಯ್ಯ ನಗರದ ಮತಗಟ್ಟೆಯಲ್ಲಿ ಮತದಾನ ಮಾಡಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.
'ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಶೆಟ್ಟರ್ ಅವರು ಗೆಲ್ಲುತ್ತಾರೆ. ಅದು ಹುಬ್ಬಳ್ಳಿ ರಾಜಕಾರಣ. ಬೆಳಗಾವಿ ಜಿಲ್ಲೆಯಲ್ಲಿ ಕನಿಷ್ಠ 13 ಸ್ಥಾನ ಬಿಜೆಪಿ ಗೆಲ್ಲುತ್ತೆ. ರಾಜ್ಯದಲ್ಲಿ ಬಿಜೆಪಿ ಪರ ಅಲೆ ಇದ್ದು, ಮತ್ತೆ ಬಿಜೆಪಿ ಸರಕಾರ ಬರಲಿದೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.