×
Ad

ಸಿದ್ದರಾಮನಹುಂಡಿಯಲ್ಲಿ ಮತ ಚಲಾಯಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ

Update: 2023-05-10 13:19 IST

ಮೈಸೂರು: ವರುಣಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವರುಣಾ ಕ್ಷೇತ್ರದ ಸಿದ್ದರಾಮನಹುಂಡಿ ಮತಗಟ್ಟೆಯಲ್ಲಿ ಹಕ್ಕು ಚಲಾಯಿಸಿದರು. 

ಇದಕ್ಕೂ ಮುನ್ನ ಅವರು ಗ್ರಾಮದ ಸಿದ್ದರಾಮೇಶ್ವರ ದೇವಾಲಯಕ್ಕೆ ಕಾಲ್ನಡಿಗೆಯಲ್ಲಿ ತೆರಳಿ ಪೂಜೆ ಸಲ್ಲಿಸಿದರು.

ಸಿದ್ಧರಾಮಯ್ಯ ಅವರು ಬುಧವಾರ ಬೆಳಗ್ಗೆ ಮೈಸೂರಿನಿಂದ ತಮ್ಮ ಹುಟ್ಟೂರು ಸಿದ್ಧರಾಮನ ಹುಂಡಿ ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಬರಮಾಡಿಕೊಂಡರು.

ಬಳಿಕ ಕಾರಿನಿಂದ ಇಳಿದು ಸುಮಾರು ಅರ್ಧ ಕೀ.ಮೀ.ದೂರದಲ್ಲಿರುವ ಅವರ ಮನೆ ದೇವರು ಸಿದ್ಧರಾಮೇಶ್ವರ ದೇವಸ್ಥಾನಕ್ಕೆ ತರಳಿ ಸಿದ್ಧರಾಮೇಶ್ವರ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

''ನೀವೂ ತಪ್ಪದೆ ಮತದಾನ ಮಾಡಿ''

''ಮತದಾನ ಗಣತಂತ್ರದ ಹಬ್ಬ, ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವದ ಬುನಾದಿಯನ್ನು ಸದೃಢಗೊಳಿಸೋಣ. ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ದುರಾಡಳಿತ, ಕೋಮುವಾದ, ಬೆಲೆ ಏರಿಕೆಗಳ ವಿರುದ್ಧ ವರುಣಾ ವಿಧಾನಸಭಾ ಕ್ಷೇತ್ರದ ನನ್ನ ಹುಟ್ಟೂರು ಸಿದ್ದರಾಮನಹುಂಡಿಯ ಮತಗಟ್ಟೆಯಲ್ಲಿ ಮತ ಚಲಾಯಿಸಿದೆ. ನೀವೂ ತಪ್ಪದೆ ಮತದಾನ ಮಾಡಿ, ಕರ್ನಾಟಕವನ್ನು ಗೆಲ್ಲಿಸಿ'' ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. 

Similar News