ವಿಜಯಪುರ| ಇವಿಎಂ ಮತಯಂತ್ರ ಸಾಗಾಟ ಶಂಕೆ: ಕಾಯ್ದಿಟ್ಟ ಮತಯಂತ್ರ ಒಡೆದು ಹಾಕಿದ ಮಸಬನಾಳ ಗ್ರಾಮಸ್ಥರು

Update: 2023-05-10 08:28 GMT

ವಿಜಯಪುರ : ಕಾಯ್ದಿರಿಸಿದ ಮತಯಂತ್ರಗಳನ್ನು ವಾಪಾಸ್ಸು ತೆಗೆದುಕೊಂಡು ಹೋಗುವ ಸಂದರ್ಭದಲ್ಲಿ ಇವಿಎಂ ಮತಯಂತ್ರ ಸಾಗಾಟ ಮಾಡಲಾಗುತ್ತದೆ ಎಂಬ ಶಂಕೆಯಲ್ಲಿ ಮಸಬಿನಾಳ ಗ್ರಾಮಸ್ಥರು ಕಾಯ್ದಿಟ್ಟ ಮತಯಂತ್ರ ಒಡೆದು ಹಾಕಿ ಕಾರು ಜಖಂ ಹಾಗೂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಕ್ಷೇತ್ರದ ಮಸಬಿನಾಳ ಗ್ರಾಮದಲ್ಲಿ ಸಂಭವಿಸಿದೆ.

ಘಟನೆಯಿಂದಾಗಿ ಕೆಲಕಾಲ ಮತದಾನ ಸ್ಥಗಿತಗೊಂಡಿದ್ದು ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.

ಬಿಸನಾಳ, ಡೋಣುರ ಗ್ರಾಮದಿಂದ ವಿಜಯಪುರಕ್ಕೆ ವಾಪಸ್ ತೆಗೆದುಕೊಂಡು ಬರುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಅರ್ಧಕ್ಕೆ ಮತದಾನ ಕಾರ್ಯ ಸ್ಥಗಿತಗೊಳಿಸಿ ವಾಪಸ್ ಕೊಂಡೊಯ್ಯಲಾಗ್ತಿದೆ ಎಂದು ತಪ್ಪು ಭಾವಿಸಿ ಮತ ಯಂತ್ರ ಒಡೆದು ಹಾಕಿ, ಅಧಿಕಾರಿಗಳ ಕಾರನ್ನು ಜಖಂಗೊಳಿಸಿದ್ದಾರೆ.
ಮತಯಂತ್ರ ಕೆಟ್ಟಲ್ಲಿ ಬಳಕೆ ಎಂದು ರಿಸರ್ವ್ ಇಡಲಾಗಿದ್ದ ಇವಿಎಂ, ವಿವಿಪ್ಯಾಟ್ ಮಶೀನ್ ಗಳು ವಾಪಸ್ ತರುವುದನ್ನು ಗಮನಿಸಿದ ಸಿಬ್ಬಂದಿಗಳನ್ನು ಪ್ರಶ್ನಿಸಿದ್ದಾರೆ.
ಸಿಬ್ಬಂದಿ ಸರಿಯಾಗಿ ಉತ್ತರಿಸದೇ ಇದ್ದಾಗ, ತಪ್ಪು ಕಲ್ಪನೆ ಮೂಡಿಸಿಕೊಂಡ ಗ್ರಾಮಸ್ಥರು ಸಿಪಿಐ, ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

Similar News