×
Ad

ಬಂಟ್ವಾಳ: ಮತ ಚಲಾಯಿಸಿದ ಜನಾರ್ದನ ಪೂಜಾರಿ, ರಮಾನಾಥ ರೈ

Update: 2023-05-10 15:19 IST

ಬಂಟ್ವಾಳ, ಮೇ 10: ರಾಜ್ಯ ವಿಧಾನಸಭೆಗೆ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಕೇಂದ್ರ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಅವರು ಬಂಟ್ವಾಳದ ಎಸ್.ವಿ.ಎಸ್. ಶಾಲೆ ಮತಗಟ್ಟೆಯಲ್ಲಿ ತಮ್ಮ ಮತ ಚಲಾಯಿಸಿದರು.

ಅದೇರೀತಿ ಮಾಜಿ ಸಚಿವ, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ರಮಾನಾಥ ರೈ ಕುಟುಂಬ ಸಮೇತರಾಗಿ ಕಳ್ಳಿಗೆ ಗ್ರಾಮದ ತೊಡಂಬಿಲ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ಮತ ಚಲಾಯಿಸುವ ಮುನ್ನ ಬಂಟ್ವಾಳ ತಿರುಮಲ ಶ್ರೀ ವೆಂಕರಮಣ ದೇವಸ್ಥಾನ ಹಾಗೂ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ  ವಿಶೇಷ ಪೂಜೆ ಸಲ್ಲಿಸಿದರು.

ಕೇಂದ್ರ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಬಂಟ್ವಾಳದ ಎಸ್.ವಿ.ಎಸ್. ಶಾಲೆ ಮತಗಟ್ಟೆಯಲ್ಲಿ ತಮ್ಮ ಮತ ಚಲಾಯಿಸಿದರು.

Similar News