ಮತದಾನ ಮಾಡಿ ಬರುವಾಗ ಕಾಡಾನೆ ದಾಳಿಗೆ ವ್ಯಕ್ತಿ ಬಲಿ
Update: 2023-05-10 18:04 IST
ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಾರ್ಟಳ್ಳಿ ಸಮೀಪ ತೋಕೆರೆ ಗ್ರಾಮದಲ್ಲಿ ಮತದಾನ ಮಾಡಿ, ಕಾಲುದಾರಿಯಲ್ಲಿ ವಾಪಸ್ ಬರುತ್ತಿದ್ದಾಗ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಬುಧವಾರ ವರದಿಯಾಗಿದೆ.
ಮಾರ್ಟಳ್ಳಿ ಗ್ರಾಮದ ಪುಟ್ಟಸ್ವಾಮಿ (42) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ.
ಪುಟ್ಟಸ್ವಾಮಿ ಬೆಳಗ್ಗೆ ತಾಂಡಮೇಡು ಗ್ರಾಮದ ಮತಗಟ್ಟೆಗೆ ಹೋಗಿ ಮತದಾನ ಮಾಡಿ ಪತ್ನಿ ಜೊತೆ ಬರುತ್ತಿದ್ದ ವೇಳೆ ಗದಿಗೇರಿ ದೇವಸ್ಥಾನದ ಸಮೀಪ ಘಟನೆ ಕಾಡಾನೆ ದಾಳಿ ಮಾಡಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ಬೇಟೆ ಪರಿಶೀಲನೆ