ಚುನಾವಣೋತ್ತರ ಸಮೀಕ್ಷೆ ಪ್ರಕಟ: ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ
Update: 2023-05-10 23:07 IST
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಮತದಾನ ಕಳೆದ ಬಳಿಕ ಇದೀಗ ಚುನಾವಣಾ ನಂತರದ ಸಮೀಕ್ಷೆಗಳು ಪ್ರಕಟವಾಗುತ್ತಿದೆ. ಹಲವು ಚುನಾವಣೋತ್ತರ ಸಮೀಕ್ಷೆಗಳು ಅತಂತ್ರ ವಿಧಾನಸಭೆ ಸೃಷ್ಟಿಯ ಕುರಿತು ಪ್ರತಿಪಾದಿಸಿ, ಕಾಂಗ್ರೆಸ್ ಹೆಚ್ಚು ಸೀಟುಗಳನ್ನು ಪಡೆಯಲಿದೆ ಎಂದು ಹೇಳಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್, 'ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚಿಸಲಿದೆ' ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
''ಚುನಾವಣೋತ್ತರ ಸಮೀಕ್ಷೆಗಳ ಪ್ರಕಾರ, ಕಾಂಗ್ರೆಸ್ ಏಕೈಕ ದೊಡ್ಡ ಪಕ್ಷವಾಗಿದೆ. ಬೇರೆ ಯಾವುದೇ ಪಕ್ಷದೊಂದಿಗೆ, ವಿಶೇಷವಾಗಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ'' ಎಂದು ಶೆಟ್ಟರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.