ಮತಗಟ್ಟೆ ಬಳಿ ಪ್ರಚಾರ: ಜನಾರ್ದನ ರೆಡ್ಡಿ ವಿರುದ್ಧ ಪ್ರಕರಣ ದಾಖಲು

Update: 2023-05-11 05:03 GMT

ಕೊಪ್ಪಳ: ಮತಗಟ್ಟೆಯ ಪ್ರಚಾರ ಮಾಡುತ್ತಿದ್ದ ಆರೋಪದ ಮೇಲೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಜನಾರ್ದನ ರೆಡ್ಡಿ ವಿರುದ್ಧ ಗಂಗಾವತಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಮತಗಟ್ಟೆಯ ಸುತ್ತಲಿನ 100 ಮೀಟರ್‌ನ ನಿಷೇಧಿತ ಪ್ರದೇಶದಲ್ಲಿ ಜನಾರ್ದನ ರೆಡ್ಡಿ ತಮ್ಮ ಬೆಂಬಲಿಗರು ಹಾಗೂ ಪಕ್ಷದ ಕಾರ್ಯಕರ್ತರ ಜೊತೆ ಪ್ರಚಾರ ಮಾಡುತ್ತಿದ್ದರು. ಇದರಿಂದ ಗದ್ದಲದ ವಾತಾವರಣ ಸೃಷ್ಟಿಯಾಗಿತ್ತು ಎಂದು ಗಂಗಾವತಿ ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿ ಸನಿತ್‌ ಸಿ. ದೂರು ನೀಡಿದ್ದರು. 

ಚುನಾವಣಾ ಅಧಿಕಾರಿಯ ಈ ದೂರಿನ ಅನ್ವಯ ಗಂಗಾವತಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

Similar News