ಮೇ 12ರಂದು 'ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ' ಪ್ರದಾನ, ಕವಿಗೋಷ್ಠಿ
ಮಂಗಳೂರು, ಮೇ 11: ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಕೃತಿಗೆ ಮುಸ್ಲಿಮ್ ಲೇಖಕರ ಸಂಘವು ದಿವಂಗತ ಯು.ಟಿ. ಫರೀದ್ ಸ್ಮರಣಾರ್ಥ ನೀಡುವ ರಾಜ್ಯ ಮಟ್ಟದ 'ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ' ಪ್ರದಾನ ಮತ್ತು ಬಹುಭಾಷಾ ಕವಿಗೋಷ್ಠಿ ಕಾರ್ಯಕ್ರಮವು ಮೇ 12ರಂದು ಸಂಜೆ 4:30ಕ್ಕೆ ನಡೆಯಲಿದೆ.
ನಗರದ ಕಂಕನಾಡಿ ಮಸೀದಿ ಬಳಿಯ ಜಮೀಯ್ಯತುಲ್ ಫಲಾಹ್ ಸಭಾಂಗಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮಾಜಿ ಸಚಿವ, ಶಾಸಕ ಯು.ಟಿ.ಖಾದರ್ ಪ್ರಶಸ್ತಿ ಪ್ರದಾನ ಮಾಡಲಿದ್ದು, ಲೇಖಕ, ಕೃಷಿ ಅಧಿಕಾರಿ ಡಾ.ನೂರ್ ಸಮದ್ ಅಬ್ಬಲಗೆರೆ (ಕೃತಿ: ವಿಸ್ಮಯ ಕೀಟ ಪ್ರಪಂಚ) ಪ್ರಶಸ್ತಿ ಸ್ವೀಕರಿಸಲಿದ್ದಾರೆ.
ಮುಸ್ಲಿಮ್ ಲೇಖಕರ ಸಂಘದ ಅಧ್ಯಕ್ಷ ಉಮರ್ ಯು.ಎಚ್. ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ 'ಸೌಹಾರ್ದ ಪರಂಪರೆ ಅಂದು-ಇಂದು-ಮುಂದು' ಎಂಬ ವಿಷಯದಲ್ಲಿ ಖ್ಯಾತ ವ್ಯಂಗ್ಯ ಚಿತ್ರಗಾರ ದಿನೇಶ್ ಕುಕ್ಕುಜಡ್ಕ ಪ್ರಧಾನ ಭಾಷಣ ಮಾಡಲಿದ್ದಾರೆ.
ಕವಿಗಳಾದ ಮುಹಮ್ಮದ್ ಬಡ್ಡೂರು, ರಾಜಾರಾಮ ವರ್ಮ ವಿಟ್ಲ, ವಿಲ್ಸನ್ ಕಟೀಲ್, ಡಾ. ಅರುಣ್ ಉಳ್ಳಾಲ ಮತ್ತು
ತನ್ಸೀರಾ ಆತೂರ್ ಬಹುಭಾಷಾ ಕವಿಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಮುಸ್ಲಿಮ್ ಲೇಖಕರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎ. ಮುಹಮ್ಮದ್ ಅಲಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.