×
Ad

ಮತದಾನ ಪೂರ್ಣ ಬೆನ್ನಲ್ಲೇ ಸಿಂಗಾಪುರಕ್ಕೆ ತೆರಳಿದ ಕುಮಾರಸ್ವಾಮಿ

Update: 2023-05-11 13:08 IST

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಿನ್ನೆ ರಾತ್ರಿ ಸಿಂಗಾಪುರಕ್ಕೆ ತೆರಳಿದ್ದು, ಎರಡು ದಿನಗಳ ಕಾಲ ವಿಶ್ರಾಂತಿ ಪಡೆದ ಬಳಿಕ ರಾಜ್ಯಕ್ಕೆ ಮರಳಲಿದ್ದಾರೆ.

ರಾಜ್ಯದಲ್ಲಿ ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬರಬೇಕೆಂಬ ಗುರಿಯೊಂದಿಗೆ ಜನರ ಆಶೀರ್ವಾದ ಪಡೆಯಲು ನಿರಂತರ ಪಂಚರತ್ನ ರಥಯಾತ್ರೆ ಕೈಗೊಂಡಿದ್ದರು. ಸತತ ಚುನಾವಣಾ ಪ್ರಚಾರದಿಂದ ಆಯಾಸಗೊಂಡಿದ್ದ ಕುಮಾರಸ್ವಾಮಿ ವಿಶ್ರಾಂತಿಗಾಗಿ ವಿದೇಶ ಪ್ರವಾಸ ಕೈಗೊಂಡಿದ್ದಾರೆನ್ನಲಾಗಿದೆ.

ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುವ ಮೇ 13ರಂದು ಬೆಳಿಗ್ಗೆ ಬೆಂಗಳೂರಿಗೆ ಮರಳಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

Similar News