ಕಲಬುರಗಿ: ನೇಣುಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ ಮೃತದೇಹ ಪತ್ತೆ
Update: 2023-05-11 14:00 IST
ಕಲಬುರಗಿ: ನೇಣುಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನೋರ್ವನ ಮೃತದೇಹ ಪತ್ತೆಯಾಗಿರುವ ಘಟನೆ ಚಿಂಚೋಳಿ ತಾಲೂಕಿನ ಸಲಗರ ಬಸಂತಪುರ ಗ್ರಾಮದಲ್ಲಿ ಗುರುವಾರ ವರದಿಯಾಗಿದೆ.
ಸಲಗರ ಬಸಂತಪುರ ಗ್ರಾಮದ ರಾಮು ರಾಠೋಡ್(45) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ನಿನ್ನೆ ನಡೆದ ಚುನಾವಣೆಯಲ್ಲಿ ಬಿಜೆಪಿ ಪೋಲಿಂಗ್ ಬೂತ್ ಏಜೆಂಟ್ ಆಗಿ ಕಾರ್ಯನಿರ್ವಹಿಸಿದ್ದ ರಾಮು ನಿನ್ನೆ ರಾತ್ರಿ ಮನೆಗೆ ಬಂದಿರಲಿಲ್ಲ. ಇಂದು ಅವರ ಮೃತದೇಹವು (ಗುರುವಾರ) ಮುಂಜಾನೆ ತಾಂಡಾದ ಹೊರವಲಯದಲ್ಲಿ ಮರದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಹೇಳಲಾಗಿದೆ.
ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ.