'ದಿ ಕೇರಳ ಸ್ಟೋರಿ'ಗೆ ತೆರಿಗೆ ವಿನಾಯಿತಿ ಘೋಷಿಸಿದ ಹರ್ಯಾಣ ಸರ್ಕಾರ
Update: 2023-05-11 16:47 IST
ಚಂಡೀಗಢ: ಮನೋಹರ್ ಲಾಲ್ ಖಟ್ಟರ್ ನೇತೃತ್ವದ ಬಿಜೆಪಿ ಸರ್ಕಾರವು 'ದಿ ಕೇರಳ ಸ್ಟೋರಿ' ಸಿನಿಮಾಗೆ ಹರ್ಯಾಣ ರಾಜ್ಯದಲ್ಲಿ ಶೇ. 100 ತೆರಿಗೆ ವಿನಾಯಿತಿ ಘೋಷಿಸಿದೆ.
ಬಿಜೆಪಿ ಸರ್ಕಾರಗಳು ಅಸ್ತಿತ್ವದಲ್ಲಿರುವ ಮಧ್ಯಪ್ರದೇಶ ಹಾಗೂ ಉತ್ತರ ಪ್ರದೇಶ ರಾಜ್ಯಗಳಲ್ಲಿ ಈ ಮುನ್ನ 'ದಿ ಕೇರಳ ಸ್ಟೋರಿ' ಸಿನಿಮಾಗೆ ತೆರಿಗೆ ವಿನಾಯಿತಿ ಘೋಷಿಸಲಾಗಿತ್ತು. ಈ ಸಾಲಿಗೆ ಹರ್ಯಾಣ ರಾಜ್ಯವೂ ಸೇರ್ಪಡೆಯಾಗಿದೆ.
'ದಿ ಕೇರಳ ಸ್ಟೋರಿ' ಸಿನಿಮಾವು ದೇಶಾದ್ಯಂತ ಭಾರಿ ವಿವಾದಕ್ಕೆ ಗುರಿಯಾಗಿದೆ.