×
Ad

​ಶಾಸಕ ಸುಕುಮಾರ್ ಶೆಟ್ಟಿ ಅವರನ್ನು ಉಚ್ಛಾಟಿಸಿಲ್ಲ: ಬಿಜೆಪಿ ಸ್ಪಷ್ಟನೆ

Update: 2023-05-11 20:44 IST

ಉಡುಪಿ: ಬೈಂದೂರಿನ ಹಾಲಿ ಶಾಸಕ ಸುಕುಮಾರ್ ಶೆಟ್ಟಿ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟಿಸಲಾಗಿದೆಂಬ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಿರುವ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್ ಕುಯಿಲಾಡಿ, ಅಂತಹ ಯಾವುದೇ ರೀತಿಯ ಬೆಳವಣಿಗೆ ನಡೆದಿಲ್ಲ ಎಂದು ತಿಳಿಸಿದ್ದಾರೆ.

‘ಸುಕುಮಾರ್ ಶೆಟ್ಟಿ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಅವರ ಸಹಿ ಇರುವ ನಕಲಿ  ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದು ಸತ್ಯಕ್ಕೆ ದೂರ ವಾಗಿದೆ. ಇಂತಹ ಯಾವುದೇ ರೀತಿಯ ಬೆಳವಣಿಗೆ ಆಗಿರುವುದಿಲ್ಲ’ ಎಂದು ಕುಯಿಲಾಡಿ ಸುರೇಶ್ ನಾಯಕ್ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

Similar News