ಶಿವಮೊಗ್ಗ | 2 ಬಸ್‌ಗಳ ನಡುವೆ ಮುಖಾಮುಖಿ ಢಿಕ್ಕಿ: ಇಬ್ಬರು ಸ್ಥಳದಲ್ಲೇ ಮೃತ್ಯು, ಮೂವರು ಗಂಭೀರ
Update: 2023-05-11 20:44 IST
ಶಿವಮೊಗ್ಗ, ಮೇ 11: ಎರಡು ಖಾಸಗಿ ಬಸ್‌ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಚೋರಡಿ ಬಳಿ ಗರುವಾರ ಸಂಜೆ ವರದಿಯಾಗಿದೆ.
ಸಾಗರ-ಶಿವಮೊಗ್ಗ ರಸ್ತೆಯ ಚೋರಡಿ ಬಳಿ ಈ ಘಟನೆ ಸಂಭವಿಸಿದ್ದು, ಮುಖಾಮುಖಿ ಢಿಕ್ಕಿ ಸಂಭವಿಸಿದಾಗ ಎರಡು ಬಸ್ ಗಳ ಅರ್ಧ ಭಾಗ ಸಂಪೂರ್ಣ ಜಖಂ ಆಗಿದ್ದು, ಗಾಯಗೊಂಡ ಎಲ್ಲ ಪ್ರಯಾಣಿಕರನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ತಿಳಿಸಿದ್ದಾರೆ
ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.