ಐಪಿಎಲ್‌ ಇತಿಹಾಸದಲ್ಲಿ ವೇಗದ ಅರ್ಧಶತಕ ಸಿಡಿಸಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್

Update: 2023-05-11 16:51 GMT

ಕೋಲ್ಕತಾ, ಮೇ 11: ರಾಜಸ್ಥಾನ ರಾಯಲ್ಸ್ ತಂಡದ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಕೇವಲ 13 ಎಸೆತಗಳಲ್ಲಿ 6 ಬೌಂಡರಿ, 3 ಸಿಕ್ಸರ್‌ಗಳ ಸಹಾಯದಿಂದ ಅರ್ಧಶತಕ ಪೂರೈಸಿದರು. ಈ ಮೂಲಕ ಐಪಿಎಲ್‌ನಲ್ಲಿ ವೇಗದ ಅರ್ಧಶತಕ ಸಿಡಿಸಿದ ಸಾಧನೆ ಮಾಡಿದ್ದಾರೆ.

ಕೋಲ್ಕತಾ  ವಿರುದ್ಧ ಗುರುವಾರ ನಡೆದ ಪಂದ್ಯದಲ್ಲಿ ರಾಜಸ್ಥಾನ ತಂಡ ಗೆಲ್ಲಲು 150 ರನ್ ಚೇಸಿಂಗ್‌ನಲ್ಲಿ ತೊಡಗಿದ್ದಾಗ ಜೈಸ್ವಾಲ್ ಈ ಸಾಧನೆ ಮಾಡಿದರು.

ಕೆ.ಎಲ್.ರಾಹುಲ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ಪರ ಮೊಹಾಲಿಯಲ್ಲಿ 2018ರಲ್ಲಿ ಕೇವಲ 14 ಎಸೆತಗಳಲ್ಲಿ 50 ರನ್ ಗಳಿಸಿದ್ದರು. ಪ್ಯಾಟ್ ಕಮಿನ್ಸ್ ಕೆಕೆಆರ್ ಪರವಾಗಿ 2022ರಲ್ಲಿ ಪುಣೆಯಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 14 ಎಸೆತಗಳಲ್ಲಿ 50 ರನ್ ಗಳಿಸಿದ್ದರು.
 

Similar News