'ರೆಸಾರ್ಟ್ ರಾಜಕಾರಣ' 25 ವರ್ಷಗಳ ಹಿಂದೆಯೇ ಮುಗಿದಿದೆ: ಡಿ.ಕೆ. ಶಿವಕುಮಾರ್
''ಪಕ್ಷದಲ್ಲಿರುವ ಹಿರಿಯರು, ಕಿರಿಯರು ಎಲ್ಲರೂ ನನಗೆ ಸಹಕಾರ ಕೊಡುತ್ತಾರೆ''
Update: 2023-05-12 15:13 IST
ಬೆಂಗಳೂರು: 25 ವರ್ಷಗಳ ಹಿಂದೆಯೇ ರೆಸಾರ್ಟ್ ರಾಜಕಾರಣ ಮುಗಿದಿದೆ. ಎಷ್ಟೇ ಸ್ಥಾನ ಬಂದರೂ ಸರ್ಕಾರ ರಚಿಸುವುದಾಗಿ ಬಿಜೆಪಿಯವರು ಹೇಳಿದ್ದಾರೆ. ಅದು ಅವರ ಭ್ರಮೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟೀಕಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ನಾನು ಅಧಿಕಾರ ಸ್ವೀಕರಿಸಿದ ದಿನದಿಂದ ನಿದ್ದೆ ಇಲ್ಲದೆ ಕೆಲಸ ಮಾಡಿದ್ದೇನೆ. ಶ್ರಮ ಹಾಕಿ ದುಡಿದಿದ್ದೇನೆ. ಒಂದು ಉತ್ತಮವಾದ ಕಾಂಗ್ರೆಸ್ ಸರ್ಕಾರ ನೀಡುತ್ತೇವೆ ಎಂದರು.
ಸಂಕಷ್ಟದ ಕಾಲದಲ್ಲಿ ಪಕ್ಷವನ್ನು ಮುನ್ನಡೆಸಿದ್ದೇನೆ. ಪಕ್ಷಕ್ಕೆ ಏನು ಮಾಡಬೇಕೋ ಎಲ್ಲವನ್ನೂ ಮಾಡಿದ್ದೇನೆ. ಈಗ ಹಿರಿಯರು, ಕಿರಿಯರು ಎಲ್ಲರೂ ನನಗೆ ಸಹಕಾರ ಕೊಡುತ್ತಾರೆ. ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಕಾಂಗ್ರೆಸ್ ನಲ್ಲಿ ಯಾವುದೇ ರೀತಿಯ ಅಧಿಕಾರ ಹಂಚಿಕೆಯ ಚರ್ಚೆ ನಡೆದಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಏನು ತೀರ್ಮಾನ ಮಾಡುತ್ತಾರೋ ಅದೇ ಅಂತಿಮ ಎಂದು ಹೇಳಿದರು.