×
Ad

ಕಾಪು: ಉಚ್ಚಿಲ ಪೊಲ್ಯದಲ್ಲಿ ಬೀದಿನಾಯಿ ದಾಳಿ; ಮಗುವಿಗೆ ಗಾಯ

Update: 2023-05-12 19:41 IST

ಕಾಪು: ಬೀದಿ ನಾಯಿಯೊಂದು ದಾಳಿ ಮಾಡಿದ ಪರಿಣಾಮ ಮಗುವೊಂದು ತೀವ್ರವಾಗಿ ಗಾಯಗೊಂಡ ಘಟನೆ ಇಂದು ಸಂಜೆ ಉಚ್ಚಿಲದ ಪೊಲ್ಯ ಎಂಬಲ್ಲಿ ನಡೆದಿದೆ.

ಗಾಯಗೊಂಡ ಮಗುವನ್ನು ಅಜ್ಜರಕಾಡು ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲ್ಯ ಪರಿಸರದಲ್ಲಿ ಬೀದಿ ನಾಯಿಗಳ‌ ಕಾಟ ಹೆಚ್ಚಿದ್ದು ಹಲವರಿಗೆ ಕಚ್ಚಿರುವುದಾಗಿ ಗ್ರಾಮಸ್ಥರು ದೂರಿದ್ದಾರೆ.

ಇದರಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದು, ಕೂಡಲೇ ಬೀದಿನಾಯಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.

Similar News