ಉಡುಪಿ: ಮೇ 15,16ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ
Update: 2023-05-12 20:50 IST
ಉಡುಪಿ, ಮೇ 12: ಉಡುಪಿ ನಗರಸಭಾ ವ್ಯಾಪ್ತಿಗೆ ನೀರು ಸರಬರಾಜು ಮಾಡುವ ಸ್ವರ್ಣಾ ನದಿಯ ಬಜೆ ಡ್ಯಾಂನ ರೇಚಕ ಸ್ಥಾವರದಲ್ಲಿ ಮೇ 15 ಮತ್ತು 16 ರಂದು ನಗರಸಭೆ ವತಿಯಿಂದ ದುರಸ್ಥಿ ಕಾರ್ಯ ಕೈಗೊಳ್ಳುವು ದರಿಂದ, ಸದರಿ ದಿನಗಳಂದು ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.