×
Ad

ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿಗೆ ಮುನ್ನಡೆ

Update: 2023-05-13 09:02 IST

ಧಾರವಾಡ : ಧಾರವಾಡ ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ‌ ಮತ‌ ಎಣಿಕೆ ಮುಕ್ತಾಯಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಮುನ್ನಡೆ ಕಾಯ್ದುಕೊಂಡಿದ್ದಾರೆ. 

ವಿನಯ ಕುಲಕರ್ಣಿ 5082 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದರೆ, ಬಿಜೆಪಿಯ ಅಮೃತ್ ದೇಸಾಯಿ ಈ ವರೆಗೆ 4240 ಮತಗಳನ್ನು ಪಡೆದುಕೊಂಡಿದ್ದಾರೆ.   

ಜಿ.ಪಂ ಸದಸ್ಯ ಯೋಗೇಶಗೌಡ ಕೊಲೆ ಪ್ರಕರಣದ ಆರೋಪಿಯಾಗಿರುವ ವಿನಯ್​ ಕುಲಕರ್ಣಿಗೆ ಕ್ಷೇತ್ರ ಪ್ರವೇಶಕ್ಕೆ ನ್ಯಾಯಾಲಯ ನಿರ್ಬಂಧ ಹೇರಿದೆ. 

Similar News