ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿಗೆ ಹಿನ್ನಡೆ
Update: 2023-05-13 09:10 IST
ಚನ್ನಪಟ್ಟಣ: ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಮತ ಎಣಿಕೆ ಆರಂಭವಾಗಿದ್ದು, ಜೆಡಿಎಸ್ ಪಕ್ಷದ ಅಭ್ಯರ್ಥಿ ಎಚ್.ಡಿ ಕುಮಾರಸ್ವಾಮಿಗೆ ಹಿನ್ನಡೆ ಆಗಿದೆ. ಇಲ್ಲಿ ಬಿಜೆಪಿ ಅಭ್ಯರ್ಥಿ ಸಿ.ಪಿಯೋಗೇಶ್ವರ್ ಮನ್ನಡೆ ಕಾಯ್ದುಕೊಂಡಿದ್ದಾರೆ.
ಕ್ಷೇತ್ರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ನೇರಾ ನೇರ ಪೈಪೋಟಿ ಇದೆ. ಇಲ್ಲಿ ಕಾಂಗ್ರೆಸ್ ಗಂಗಾಧರ್ ಅವರನ್ನು ಕಣಕ್ಕಿಳಿಸಿದ್ದು, ಪ್ರಭಾವಿ ನಾಯಕರಾದ ಹೆಚ್.ಡಿ.ಕುಮಾರಸ್ವಾಮಿ ಮತ್ತು ಸಿ.ಪಿಯೋಗೇಶ್ವರ್ ಅವರನ್ನು ಎದುರಿಸಿದ್ದಾರೆ.