ಚಳ್ಳಕೆರೆ, ಕೂಡ್ಲಿಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಗೆಲುವು; ಅಧಿಕೃತ ಘೋಷಣೆ ಬಾಕಿ
Update: 2023-05-13 11:19 IST
ಬೆಂಗಳೂರು: 224 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಕಾಂಗ್ರೆಸ್ ಮುನ್ನಡೆಯಲ್ಲಿ ಮ್ಯಾಜಿಕ್ ನಂಬರ್ ದಾಟಿದ್ದು, ಇಬ್ಬರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ.
ಬಳ್ಳಾರಿ ಜಿಲ್ಲೆಯ ಕೂಡ್ಲಿಗಿಯಲ್ಲಿ ಕಾಂಗ್ರೆಸ್ ನ ಎನ್.ಟಿ ಶ್ರೀನಿವಾಸ್ 40 ಸಾವಿರ ಮತಗಳ ಅಂತರದಲ್ಲಿ ಗೆದ್ದರೆ, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ರಘು ಮೂರ್ತಿ 16 ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.