ಕ್ಷೇತ್ರಕ್ಕೆ ಪ್ರವೇಶ ನಿಷೇಧ ಇದ್ದರೂ ಧಾರವಾಡದಲ್ಲಿ ಜಯಭೇರಿ ಬಾರಿಸಿದ ಕಾಂಗ್ರೆಸ್ ನ ವಿನಯ್ ಕುಲಕರ್ಣಿ

Update: 2023-05-13 19:26 GMT

ಬೆಂಗಳೂರು, ಮೇ 13: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪದ ಹಿನ್ನೆಲೆಯಲ್ಲಿ ಜಿಲ್ಲೆಯಿಂದ ಹೊರಗಿದ್ದುಕೊಂಡೇ ಮಾಜಿ ಸಚಿವ ವಿನಯ್ ಕುಲಕರ್ಣಿ ವಿಧಾನಸಭೆ ಚುನಾವಣೆಯಲ್ಲಿ ಧಾರವಾಡ ಗ್ರಾಮೀಣ ಕ್ಷೇತ್ರದಿಂದ ಭರ್ಜರಿ ಜಯಭೇರಿ ಬಾರಿಸಿದ್ದಾರೆ.

ಬಿಜೆಪಿಯ ಹಾಲಿ ಶಾಸಕ ಅಮೃತ್ ದೇಸಾಯಿ ವಿರುದ್ಧ ವಿನಯ್ ಕುಲಕರ್ಣಿ ಗೆಲುವು ಸಾಧಿಸಿದ್ದಾರೆ. ವಿನಯ್ ಪರ ಅವರ ಪತ್ನಿ ಶಿವಲೀಲಾ ಕುಲಕರ್ಣಿ ಹಾಗೂ ಕುಟುಂಬಸ್ಥರು ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಅಬ್ಬರದ ಪ್ರಚಾರ ನಡೆಸಿದ್ದರು.

ಕೊಲೆ ಪ್ರಕರಣ ಆರೋಪದ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆ ಪ್ರವೇಶಿಸಲು ವಿನಯ್ ಕುಲಕರ್ಣಿಗೆ ಕೋರ್ಟ್ ನಿರ್ಬಂಧ ಹೇರಿತ್ತು. ಆ ಹಿನ್ನೆಲೆಯಲ್ಲಿ ಕ್ಷೇತ್ರದ ಹೊರಗಿದ್ದುಕೊಂಡೇ ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಖುದ್ದು ಪ್ರಚಾರ ನಡೆಸದೇ ವಿನಯ್ ಕುಲಕರ್ಣಿ, ಭಾರೀ ಬಹುಮತದಿಂದ ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್‍ನ ವಿನಯ್ ಕುಲಕರ್ಣಿ ಒಟ್ಟು 89,333 ಮತಗಳನ್ನು ಪಡೆದಿದ್ದು, ಅವರ ಪ್ರತಿಸ್ಪರ್ಧಿ ಬಿಜೆಪಿಯ ಹಾಲಿ ಶಾಸಕ ಅಮೃತ್ ದೇಸಾಯಿ 71296 ಮತಗಳನ್ನು ಗಳಿಸಿದ್ದಾರೆ. ವಿನಯ್ ಅವರು ಒಟ್ಟು 18,037 ಮತಗಳ ಬಾರೀ ಅಂತರದಿಂದ ಗೆಲುವು ಸಾಧಿಸುವ ಮೂಲಕ ರಾಜಕೀಯ ಅಚ್ಚರಿ ಮೂಡಿಸಿದ್ದಾರೆ.

Similar News