ಚಿತ್ತಾಪುರದಲ್ಲಿ ಪ್ರಿಯಾಂಕ್ ಖರ್ಗೆಗೆ ಜಯ
Update: 2023-05-13 12:21 IST
ಕಲಬುರಗಿ: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದು, ಕಾಂಗ್ರೆಸ್ ಪಕ್ಷ ಬಹುಮತದ ಕಡೆಗೆ ಹೆಜ್ಜೆ ಹಾಕುತ್ತಿರುವುದು ಸದ್ಯ ಫಲಿತಾಂಶದಿಂದ ಗೋಚರಿಸುತ್ತಿದೆ.
ಕಲಬುರಗಿ ಜಿಲ್ಲೆ ಚಿತ್ತಾಪುರ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್ ಖರ್ಗೆ ಅವರು 13638 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ವಿವಿಧ ಅಪರಾಧ ಪ್ರಕರಣಗಳಲ್ಲಿ ಬಾಗಿಯಾಗಿದ್ದಾರೆನ್ನಲಾದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಅವರು ಸೋಲು ಅನುಭವಿಸಿದ್ದಾರೆ.