×
Ad

ಕೊಡಗಿನ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ; ಬಿಜೆಪಿಗೆ ತೀವ್ರ ಮುಖಭಂಗ

Update: 2023-05-13 12:45 IST

ಮಡಿಕೇರಿ ಮೇ 13 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಎ.ಎಸ್.ಪೊನ್ನಣ್ಣ ಗೆಲುವು ಸಾಧಿಸಿದ್ದಾರೆ. 20 ನೇ ಸುತ್ತಿನ ಮತ ಎಣಿಕೆಯಲ್ಲಿ ಪೊನ್ನಣ್ಣ ಅವರು 83128 ಮತಗಳನ್ನು ಗಳಿಸಿದ್ದಾರೆ. ಪ್ರತಿಸ್ಪರ್ಧಿ ಬಿಜೆಪಿಯ ಕೆ.ಜಿ.ಬೋಪಯ್ಯ ಅವರು 78397 ಮತಗಳನ್ನು ಗಳಿಸಿ ಸೋಲು ಅನುಭವಿಸಿದ್ದಾರೆ.

ಇನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಂಥರ್ ಗೌಡ ಬಿಜೆಪಿಯ ಅಪ್ಪಚ್ಚು ರಂಜನ್ ವಿರುದ್ಧ ಗೆಲುವು ಸಾಧಿಸಿದ್ದಾರೆ.

ಬಿಜೆಪಿಯ ಭದ್ರಕೋಟೆಯಂತಿರುವ ಕೊಡಗಿನ ಎರಡೂ ಕ್ಷೇತ್ರಗಳು ಕಾಂಗ್ರೆಸ್ ಪಾಲಾಗಿದ್ದು,  ಬಿಜೆಪಿ ತೀವ್ರ ಮುಖಭಂಗ ಎದುರಿಸುವಂತಿದೆ. 

Similar News