ಮಾಧ್ಯಮಗಳ ಎದುರೇ ಕಣ್ಣೀರಿಟ್ಟ ಡಿ.ಕೆ ಶಿವಕುಮಾರ್
Update: 2023-05-13 13:16 IST
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ಕಾಂಗ್ರೆಸ್ಗೆ ಭರ್ಜರಿ ಗೆಲುವು ದೊರೆಯುವುದು ಸ್ಪಷ್ಟವಾಗಿದೆ. ಕನಕಪುರದಲ್ಲಿ 1 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಜೆಡಿಎಸ್ ಅಭ್ಯರ್ಥಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆಲುವು ದಾಖಲಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಭಾವುಕರಾಗಿ ಕಣ್ಣೀರು ಹಾಕಿದರು.
ಕರ್ನಾಟಕದ ಅತಿದೊಡ್ಡ ಗೆಲುವಿಗೆ ಕಾರಣರಾದ ಪಕ್ಷದ ಕಾರ್ಯಕರ್ತರಿಗೆ ಮತ್ತು ವರಿಷ್ಠರಿಗೆ ಧನ್ಯವಾದಗಳು ಎಂದು ಅವರು ಹೇಳಿದರು.
#WATCH | Karnataka Congress President DK Shivakumar gets emotional on his party's comfortable victory in state Assembly elections pic.twitter.com/ANaqVMXgFr
— ANI (@ANI) May 13, 2023