×
Ad

ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ತಂದೆ, ಮಗನಿಗೆ ಗೆಲುವು

Update: 2023-05-13 13:46 IST

ದಾವಣಗೆರೆ: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ಕಾಂಗ್ರೆಸ್​​ಗೆ ಭರ್ಜರಿ ಗೆಲುವು ದೊರೆಯುವುದು ಸ್ಪಷ್ಟವಾಗಿದೆ. ಇನ್ನು ದಾವಣಗೆರೆ ನಗರದ ಕಾಂಗ್ರೆಸ್ ಅಭ್ಯರ್ಥಿಗಳಾದ ತಂದೆ, ಪುತ್ರನಿಗೆ ಗೆಲುವು ದೊರಕಿದೆ. 

ದಾವಣಗೆರೆ ಉತ್ತರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಎಸ್‌.ಎಸ್‌.ಮಲ್ಲಿಕಾರ್ಜುನ್‌ 78,345 ಮತಗಳನ್ನು ಪಡೆಯುವ ಗೆಲುವು ಸಾಧಿಸಿದ್ದರೆ, ಮತ್ತೊಂದೆಡೆ ದಕ್ಷಿಣದಲ್ಲಿ ತಂದೆ ಶಾಮನೂರು ಶಿವಶಂಕರಪ್ಪ 83,839 ಅವರು ಮತಗಳನ್ನು ಪಡೆಯುವ ಮೂಲಕ ವಿಜಯ ಪತಾಕೆಯನ್ನು ಹಾರಿಸಿದ್ದಾರೆ.

Similar News