×
Ad

ವರುಣಾದಲ್ಲಿ ಸಿದ್ದರಾಮಯ್ಯ ಜಯಭೇರಿ; ಸೋಮಣ್ಣಗೆ ತೀವ್ರ ಮುಖಭಂಗ

ಎರಡೂ ಕ್ಷೇತ್ರಗಳಲ್ಲಿ ಸೋತ ಸೋಮಣ್ಣ

Update: 2023-05-13 14:08 IST

ಮೈಸೂರು: ಭಾರೀ ಕುತೂಹಲ ಕೆರಳಿಸಿದ್ದ ವರುಣಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜಯಭೇರಿ ಬಾರಿಸಿದ್ದಾರೆ. ಇಲ್ಲಿ ಬಿಜೆಪಿಯ ಅಭ್ಯರ್ಥಿ ಸಚಿವ ವಿ. ಸೋಮಣ್ಣ ಸೋಲು ಅನುಭವಿಸಿದ್ದಾರೆ.

ಚಾಮರಾಜನಗರದಲ್ಲೂ ಸೋಮಣ್ಣ ಕಾಂಗ್ರೆಸ್ ಅಭ್ಯರ್ಥಿ ಎದುರು ಸೋಲನುಭವಿಸಿ ತೀವ್ರ ಮುಖಭಂಗ ಎದುರಿಸುವಂತಾಗಿದೆ. 

ಸಿದ್ದರಾಮಯ್ಯ ಸ್ಪರ್ಧೆಯಿಂದಾಗಿ ಮೈಸೂರಿನ ವರುಣಾ ಕ್ಷೇತ್ರ ರಾಜ್ಯದ ಗಮನವನ್ನು ಸೆಳೆದಿತ್ತು. ಪ್ರಭಾವಿ ನಾಯಕ ವಿ. ಸೋಮಣ್ಣ ಅವರನ್ನು ಬಿಜೆಪಿ ಇಲ್ಲಿಂದ ಕಣಕ್ಕಿಳಿಸಿದ ಹಿನ್ನೆಲೆಯಲ್ಲಿ ಈ ಕ್ಷೇತ್ರ ಮತ್ತಷ್ಟು ಕುತೂಹಲ ಹುಟ್ಟಿಸಿತ್ತು.
 

Similar News