ಶೃಂಗೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಟಿ.ಡಿ.ರಾಜೇಗೌಡಗೆ ರೋಚಕ ಗೆಲುವು
ಜಿಲ್ಲೆಯ 5ಕ್ಕೆ 5 ಕ್ಷೇತ್ರಗಳಲ್ಲೂ 'ಕೈ' ಮೇಲುಗೈ
Update: 2023-05-13 17:25 IST
ಚಿಕ್ಕಮಗಳೂರು: ಶೃಂಗೇರಿ ಕ್ಷೇತ್ರದಲ್ಲಿ ಮತ ಎಣಿಕೆಯ 18ನೇ ಸುತ್ತಿನಲ್ಲಿ ಬಿಜೆಪಿಯ ಡಿ.ಎನ್.ಜೀವರಾಜ್ ವಿರುದ್ಧ 154 ಮತಗಳ ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ.ರಾಜೇಗೌಡ ಗೆಲುವು ಸಾಧಿಸಿದ್ದಾರೆ.
ಇಲ್ಲಿ ಜೆಡಿಎಸ್ ನ ಸುಧಾಕರ್ ಶೆಟ್ಟಿ 18,946 ಮತಗಳನ್ನು ಪಡೆದುಕೊಂಡಿದ್ದಾರೆ. ಅಲ್ಪ ಮತಗಳ ಅಂತರದಲ್ಲಿ ಪರಾಭವಗೊಂಡಿರುವ ಬಿಜೆಪಿ ಅಭ್ಯರ್ಥಿ ಡಿ.ಎನ್.ಜೀವರಾಜ್ ಮರು ಮತ ಎಣಿಕೆ ನಡೆಸುವಂತೆ ಚುನಾವಣಾಧಿಕಾರಿಗೆ ಮನವಿ ಮಾಡಿದ್ದಾರೆನ್ನಲಾಗಿದೆ.
ಮೂಡಿಗೆರೆ, ತರೀಕೆರೆ, ಚಿಕ್ಕಮಗಳೂರು, ಕಡೂರಿನಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳೇ ಮೇಲುಗೈ ಸಾಧಿಸಿದ್ದು, ಜಿಲ್ಲೆಯಲ್ಲಿ ಪಾರುಪತ್ಯ ಸಾಧಿಸಿದೆ.