ಪಾಕ್ ಸೇನಾ ಮುಖ್ಯಸ್ಥರೊಂದಿಗೆ ಉತ್ತಮ ಬಾಂಧವ್ಯ: ಇಮ್ರಾನ್ ಪ್ರತಿಜ್ಞೆ
Update: 2023-05-13 22:15 IST
ಇಸ್ಲಮಾಬಾದ್, ಮೇ 13: ಅಧಿಕಾರಕ್ಕೆ ಬಂದ ಬಳಿಕ ಪಾಕ್ ಸೇನಾ ಮುಖ್ಯಸ್ಥರೊಂದಿಗೆ ಉತ್ತಮ ಬಾಂಧವ್ಯವನ್ನು ಉಳಿಸಿಕೊಳ್ಳುವುದಾಗಿ ಪಾಕಿಸ್ತಾನ್ ತೆಹ್ರೀಕೆ ಇನ್ಸಾಫ್(ಪಿಟಿಐ) ಪಕ್ಷದ ಮುಖಂಡ, ಮಾಜಿ ಪ್ರಧಾನಿ ಇಮ್ರಾನ್ಖಾನ್ ಹೇಳಿದ್ದಾರೆ.
ಇಸ್ಲಮಾಬಾದ್ ಹೈಕೋರ್ಟ್ ನಲ್ಲಿ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸೇನಾ ಮುಖ್ಯಸ್ಥ ಜನರಲ್ ಅಸೀಮ್ ಮುನೀರ್ ಬಗ್ಗೆ ಎಂದಿಗೂ ಅವಹೇಳನಕಾರಿ ಹೇಳಿಕೆ ನೀಡಿಲ್ಲ. ಆದರೆ ಕೆಲವರು ಈ ಬಗ್ಗೆ ಮುನೀರ್ಗೆ ತಪ್ಪು ಮಾಹಿತಿ ನೀಡಿದ್ದಾರೆ. ಅಧಿಕಾರಕ್ಕೆ ಬಂದರೆ ಸೇನಾ ಮುಖ್ಯಸ್ಥರೊಂದಿಗೆ ಉತ್ತಮ ಬಾಂಧವ್ಯವನ್ನು ಉಳಿಸಿಕೊಳ್ಳುವುದಾಗಿ ಹೇಳಿದರು.
ಪಾಕಿಸ್ತಾನದ ನ್ಯಾಯಾಂಗ ವ್ಯವಸ್ಥೆಯಲ್ಲಿ ತನಗೆ ನಂಬಿಕೆಯಿತ್ತು. ದೇಶದಲ್ಲಿರುವ ಜಂಗಲ್ರಾಜ್ ವ್ಯವಸ್ಥೆಯಲ್ಲಿನ ನ್ಯಾಯಾಂಗ ವ್ಯವಸ್ಥೆ ಮಾತ್ರ ವಿಶ್ವಾಸಕ್ಕೆ ಅರ್ಹ ಎಂಬ ತನ್ನ ನಂಬಿಕೆ ಸತ್ಯವಾಗಿದೆ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ