×
Ad

ಮುಖ್ಯಮಂತ್ರಿ ಆಯ್ಕೆ: ಮೂವರು ವೀಕ್ಷಕರನ್ನು ನೇಮಿಸಿದ ಕಾಂಗ್ರೆಸ್

Update: 2023-05-14 15:45 IST

ಬೆಂಗಳೂರು: ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಯ್ಕೆಗೆ ಮೂವರು ವೀಕ್ಷಕರನ್ನು ಎಐಸಿಸಿ ನೇಮಕ ಮಾಡಿದೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಕಾಂಗ್ರೆಸ್‌ ನಾಯಕ ಕೆ.ಸಿ. ವೇಣುಗೋಪಾಲ್‌, ಕರ್ನಾಟಕದ ಸಿಎಲ್‌ಪಿ ನಾಯಕರ ಆಯ್ಕೆಗೆ ವೀಕ್ಷಕರಾಗಿ ಸುಶೀಲ್‌ಕುಮಾರ್ ಶಿಂಧೆ (ಮಾಜಿ ಮುಖ್ಯಮಂತ್ರಿ, ಮಹಾರಾಷ್ಟ್ರ), ಜಿತೇಂದ್ರ ಸಿಂಗ್ (ಎಐಸಿಸಿ ಜಿಎಸ್) ಮತ್ತು  ದೀಪಕ್ ಬಬಾರಿಯಾ (ಮಾಜಿ ಎಐಸಿಸಿ ಜಿಎಸ್) ಅವರನ್ನು ಎಐಸಿಸಿ ಅಧ್ಯಕ್ಷರು ನಿಯೋಜಿಸಿದ್ದಾರೆ ಎಂದು ಟ್ವೀಟ್‌ ಮಾಡಿದ್ದಾರೆ.
 

Similar News