ಪಕ್ಷೇತರ ಶಾಸಕಿ ಲತಾ ಮಲ್ಲಿಕಾರ್ಜುನ್ ಕಾಂಗ್ರೆಸ್‍ಗೆ ಬೆಂಬಲ ಘೋಷಣೆ
Update: 2023-05-14 16:00 IST
ಬೆಂಗಳೂರು, ಮೇ 14: ವಿಜಯನಗರ ಜಿಲ್ಲೆಯ ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿರುವ ಲತಾ ಮಲ್ಲಿಕಾರ್ಜುನ್ ಅವರು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೇಷರತ್ ಬೆಂಬಲ ಘೋಷಿಸಿದ್ದಾರೆ.
ರವಿವಾರ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿರುವ ನೂತನ ಶಾಸಕಿ ಲತಾ ಮಲ್ಲಿಕಾರ್ಜುನ್ ಅವರು, ಮಾಜಿ ಉಪ ಮುಖ್ಯಮಂತ್ರಿ ಎಂ.ಪಿ.ಪ್ರಕಾಶ್ ಅವರ ಪುತ್ರಿ. ಲತಾ ಅವರು ಹರಪನಹಳ್ಳಿ ಕ್ಷೇತ್ರದಲ್ಲಿ ಮಾಜಿ ಸಚಿವ, ಬಿಜೆಪಿಯ ಜಿ.ಕರುಣಾಕರ ರೆಡ್ಡಿ ಅವರನ್ನು 13,845 ಮತಗಳ ಅಂತರದಿಂದ ಸೋಲಿಸಿದ್ದಾರೆ.
ಹರಪನಹಳ್ಳಿ ಕ್ಷೇತ್ರದಿಂದ ವಿಧಾನಸಭೆಗೆ ಪಕ್ಷೇತರ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಲತಾ ಮಲ್ಲಿಕಾರ್ಜುನ ಅವರು ಇಂದು ನನ್ನನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಅವರಿಗೆ ಶುಭ ಹಾರೈಸಿದೆ. pic.twitter.com/Ar2QcTU8Gf
— Siddaramaiah (@siddaramaiah) May 14, 2023