ನೂತನ 224 ವಿಧಾನಸಭಾ ಸದಸ್ಯರ ಅಧಿಸೂಚಿತ ಪಟ್ಟಿ ರಾಜ್ಯಪಾಲರಿಗೆ ಸಲ್ಲಿಸಿದ ಚುನಾವಣಾ ಆಯೋಗ

Update: 2023-05-14 10:39 GMT

ಬೆಂಗಳೂರು: ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ವಿಧಾನಸಭೆಗೆ ಆಯ್ಕೆಗೊಂಡ ನೂತನ 224 ವಿಧಾನಸಭಾ ಸದಸ್ಯರ ಅಧಿಸೂಚಿತ ಪಟ್ಟಿಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಇಂದು ಸಲ್ಲಿಸಲಾಯಿತು.

ಭಾರತ ಚುನಾವಣಾ ಆಯೋಗದ ಉಪ ಚುನಾವಣಾ ಆಯುಕ್ತ ಅಜಯ್ ಬಾಡೂ, ಆಯೋಗದ ಪ್ರಧಾನ ಕಾರ್ಯದರ್ಶಿ ನರೇಂದ್ರ ಎನ್ ಬುಟೋಲಿಯ ಹಾಗೂ ಕಾರ್ಯದರ್ಶಿ ಬಿ.ಸಿ.ಪಾತ್ರ ಮತ್ತು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರ ತಂಡ ಸದಸ್ಯರ ಪಟ್ಟಿಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಅಪರ ಮುಖ್ಯ ಚುನಾವಣಾಧಿಕಾರಿಗಳಾದ ರಾಜೇಂದ್ರ ಚೋಳನ್ ಹಾಗೂ ವೆಂಕಟೇಶ್ ಕುಮಾರ್ ಅವರು ಉಪಸ್ಥಿತರಿದ್ದರು.

Similar News