ಗುರುವಾರದಂದು ಕರ್ನಾಟಕದ ನೂತನ ಮುಖ್ಯಮಂತ್ರಿ ಪ್ರಮಾಣವಚನ; ವರದಿ

Update: 2023-05-14 13:09 GMT

ಬೆಂಗಳೂರು: ನೂತನ ಕರ್ನಾಟಕ ಮುಖ್ಯಮಂತ್ರಿ ಹಾಗೂ ಕ್ಯಾಬಿನೆಟ್‌ ಗುರುವಾರದಂದು ಪ್ರಮಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ ಎಂದು NDTV ವರದಿ ಮಾಡಿದೆ. ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ಕಾಂಗ್ರೆಸ್‌ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 

ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷವು ಬಿಜೆಪಿಯನ್ನು ಹೀನಾಯವಾಗಿ ಸೋಲಿಸಿ 135 ಸ್ಥಾನಗಳನ್ನು ಪಡೆದಿತ್ತು. ಈ ನಡುವೆ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಕುತೂಹಲವೂ ರಾಜ್ಯದ ಜನತೆಯನ್ನು ಕಾಡುತ್ತಿದೆ. 

Similar News