×
Ad

ಉಡುಪಿ: ಮೇ 19ರಂದು ಮಿನಿ ಉದ್ಯೋಗ ಮೇಳ

Update: 2023-05-15 19:53 IST

ಉಡುಪಿ, ಮೇ 15: ಅದ್ವಿತ್ ಐ ಟೆಕ್ ಪ್ರೈ.ಲಿ., ಆಭರಣ ಮೋಟಾರ್ಸ್, ಸುಷ್ಮಾ ಆಟೋಮೊಬೈಲ್ಸ್, ಕಾಂಚನ್ ಅಥರ್ ಎಲೆಕ್ಟ್ರಿಕಲ್ ಹಾಗೂ ಬಿ.ಎಸ್.ಎಲ್. ಇಂಡಿಯಾ ಪ್ರೈ.ಲಿ ಕಂಪೆನಿಗಳ ವತಿಯಿಂದ ಮೇ 19ರಂದು ಬೆಳಗ್ಗೆ 10:30ಕ್ಕೆ ಕೋರ್ಟ್ ರಸ್ತೆಯ ಸಂಪರ್ಕ ಜೆರಾಕ್ಸ್ ಬಳಿ ನಂದ ಕಮರ್ಷಿಯಲ್ ಕಾಂಪ್ಲೆಕ್ಸ್‌ನ 2ನೇ ಮಹಡಿಯಲ್ಲಿರುವ ಬಿ.ಎಸ್.ಎಲ್ ಇಂಡಿಯಾ ಪ್ರೈ.ಲಿ.ನಲ್ಲಿ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಎಸೆಸೆಲ್ಸಿ, ಪಿಯುಸಿ, ಐಟಿಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್ ಮತ್ತು ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ:8105618291, 9945856670 ಹಾಗೂ 9901472710 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Similar News