ವಿಜಯಪುರ | ವಾಟ್ಸಪ್‌ನಲ್ಲಿ ಪಾಕಿಸ್ತಾನ ಪರ ಬರಹ ಆರೋಪ: ವೀರೇಶ್ ಪರಯ್ಯ ಬಂಧನ
ವಿಜಯಪುರ: ಪಾಕಿಸ್ತಾನ ಪರ ಬರಹ ಬರೆದು ಅದನ್ನು ವಾಟ್ಸಪ್‌ನಲ್ಲಿ ಪೋಸ್ಟ್ ಮಾಡಿರುವ ಆರೋಪದ ಮೇರೆಗೆ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದ ಕಾನಬಾವಿ ಓಣಿಯ ನಿವಾಸಿ ವೀರೇಶ್ ಪರಯ್ಯ ಕರ್ಪೂರಮಠ (31) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಮುದ್ದೇಬಿಹಾಳದ ನೂತನ ಶಾಸಕರಾಗಿ ಆಯ್ಕೆಯಾಗಿರುವ ಕಾಂಗ್ರೆಸ್‌ನ ಅಪ್ಪಾಜಿ ನಾಡಗೌಡರ ಹೆಸರಿನ ವಾಟ್ಸಪ್ ಗ್ರೂಪ್ ಒಂದರಲ್ಲಿ ವೀರೇಶ್ ಪಾಕಿಸ್ತಾನ್ ಝಿಂದಾಬಾದ್ ಎನ್ನುವ ಬರಹವನ್ನು ಪೋಸ್ಟ್ ಮತ್ತು ಶೇರ್ ಮಾಡಿದ್ದ ಎನ್ನಲಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಆತನನ್ನು ನಾಲತವಾಡದಲ್ಲಿರುವ ಪೊಲೀಸ್ ಔಟ್‌ಪೋಸ್ಟ್ ಗೆ ಕರೆತಂದು ಪೊಲೀಸರು ವಶಕ್ಕೆ ಒಪ್ಪಿಸಿ ಕ್ರಮಕ್ಕೆ ಆಗ್ರಹಿಸಿದ್ದಾರೆ.
ವಿಚಾರಣೆ ನಡೆಸಿದ ಮೇಲೆ ವೀರೇಶ್ ತಪ್ಪು ಮಾಡಿದ್ದು ಸಾಬೀತಾಗಿತ್ತು. ಅಲ್ಲಿಂದ ಅವನನ್ನು ಮುದ್ದೇಬಿಹಾಳ ಪೊಲೀಸ್ ಠಾಣೆಗೆ ಕರೆತಂದು ಹೆಚ್ಚಿನ ವಿಚಾರಣೆ ನಡೆಸಲಾಗಿತ್ತು.
ವೀರೇಶನು ಬರಹ ರೂಪದಲ್ಲಿ ಪಾಕಿಸ್ತಾನ ಪರ ಘೋಷಣೆ ಹಾಕಿರುವುದು ದೃಢಪಟ್ಟಿರುವ ಹಿನ್ನೆಲೆ ನಾಲತವಾಡ ಭಾಗದ ಬೀಟ್ ಪೊಲೀಸ್ ಪಿ.ಎಸ್.ಪಾಟೀಲ ಸರ್ಕಾರದ ಪರವಾಗಿ ಸಲ್ಲಿಸಿದ ದೂರಿನನ್ವಯ ಪೂರ್ವಾ ಗ್ರಹಪೀಡಿತ ಆರೋಪದಡಿ ಪಿಎಸೈ ಆರೀಫ್ ಮುಷಾಪುರಿ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಕೊಂಡಿದ್ದಾರೆ.