ಸಿಎಂ ಆಯ್ಕೆ ಕಗ್ಗಂಟು | ದಿಲ್ಲಿಯತ್ತ ಡಿಕೆಶಿ: ಇಂದೇ ಮುಖ್ಯಮಂತ್ರಿ ಘೋಷಣೆ ?
ಬೆಂಗಳೂರು, ಮೇ 16: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಪಡೆದಿರುವ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಯಾರಾಗ್ತಾರೆ ಎಂಬ ಕುತೂಹಲ ಮುಂದುವರಿದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವೆ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ಏರ್ಪಟ್ಟಿದೆ.
ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಬೆಳಗ್ಗೆ 9:50ಕ್ಕೆ ದೇವನಹಳ್ಳಿ ವಿಮಾನ ನಿಲ್ದಾಣದಿಂದ ವಿಸ್ತಾರ ವಿಮಾನದಲ್ಲಿ ದಿಲ್ಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಈ ನಡುವೆ ಸಿದ್ದರಾಮಯ್ಯರನ್ನು AICC ಈಗಾಗಲೇ ದಿಲ್ಲಿಗೆ ಕರೆಸಿಕೊಂಡಿದೆ.
ಸೋಮವಾರ ಆರೋಗ್ಯದಲ್ಲಿ ಸಣ್ಣ ಪ್ರಮಾಣದ ಏರುಪೇರಾದ ಕಾರಣ ವಿಶ್ರಾಂತಿ ಮೊರೆ ಹೋಗಿದ್ದ ಡಿಕೆಶಿ ಇಂದು ಬೆಳಗ್ಗೆ ದಿಲ್ಲಿಯತ್ತ ಮುಖ ಮಾಡಿದ್ದಾರೆ.
ಇದನ್ನೂ ಓದಿ: ಬಿಜೆಪಿ ಮುಖಂಡರ ಸಭೆ: ವಿಪಕ್ಷ ನಾಯಕ ಸ್ಥಾನದ ರೇಸ್‌ನಲ್ಲಿ ಯಾರಿದ್ದಾರೆ?
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಡಿಕೆಶಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಕರೆ ಮಾಡಿ ಒಬ್ಬಂಟಿಯಾಗಿ ದಿಲ್ಲಿಗೆ ಆಗಮಿಸುವಂತೆ ತಿಳಿಸಿದ್ದಾರೆ. ಅದರಂತೆ ದಿಲ್ಲಿಗೆ ಹೊರಟಿದ್ದೇನೆ ಎಂದು ಹೇಳಿದ್ದಾರೆ.