ಅಕ್ರಮ ಹಣ ವರ್ಗಾವಣೆ ಪ್ರಕರಣ: 'ಪೊನ್ನಿಯಿನ್ ಸೆಲ್ವನ್' ಚಿತ್ರ ನಿರ್ಮಾಣ ಸಂಸ್ಥೆಯ ಮೇಲೆ ಈಡಿ ದಾಳಿ
Update: 2023-05-16 10:54 IST
ಚೆನ್ನೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಮಿಳುನಾಡು ರಾಜಧಾನಿ ಚೆನ್ನೈನಲ್ಲಿರುವ ಬಾಕ್ಸ್ ಆಫೀಸ್ ಹಿಟ್ ಸಿನಿಮಾಗಳಾದ 'ಪೊನ್ನಿಯಿನ್ ಸೆಲ್ವನ್' 1 ಹಾಗೂ 2 ಚಿತ್ರವನ್ನು ನಿರ್ಮಿಸಿದ LYCA ಪ್ರೊಡಕ್ಷನ್ಸ್ ಆವರಣದಲ್ಲಿ ಜಾರಿ ನಿರ್ದೇಶನಾಲಯವು(ಈಡಿ) ಶೋಧ ಕಾರ್ಯ ನಡೆಸುತ್ತಿದೆ.
ಕೇಂದ್ರ ತನಿಖಾ ಸಂಸ್ಥೆಯು ಪ್ರೊಡಕ್ಷನ್ ಹೌಸ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ದಾಖಲಿಸಿದ ನಂತರ ಚೆನ್ನೈ ನಗರದ ಸುಮಾರು ಎಂಟು ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸುತ್ತಿದೆ.