ರೋಜ್‌ಗಾರ್ ಮೇಳ: 71,000 ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಿ ಮೋದಿ

Update: 2023-05-16 05:56 GMT

ಹೊಸದಿಲ್ಲಿ: ಮೆಗಾ ಉದ್ಯೋಗಗಳಿಗೆ  ಉತ್ತೇಜನ ನೀಡುವ ಕ್ರಮವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ 71,000 ನೇಮಕಾತಿ ಪತ್ರಗಳನ್ನು ವಿತರಿಸಿದರು

. ಪ್ರಧಾನಿ ಮೋದಿ ಅವರು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ನೇಮಕಗೊಂಡವರನ್ನು ಉದ್ದೇಶಿಸಿ ಮಾತನಾಡಿದರು.

ದೇಶಾದ್ಯಂತ 45 ಸ್ಥಳಗಳಲ್ಲಿ ರೋಜ್‌ಗಾರ್ ಮೇಳ ಆಯೋಜಿಸಲಾಗಿತ್ತು. ಈ ಉಪಕ್ರಮವನ್ನು ಬೆಂಬಲಿಸುವ ಸಲುವಾಗಿ ಕೇಂದ್ರ ಸರಕಾರದ ಇಲಾಖೆಗಳು ಹಾಗೂ ರಾಜ್ಯ ಸರ್ಕಾರಗಳು/ಕೇಂದ್ರಾಡಳಿತಗಳಿಗೆ ನೇಮಕಾತಿಗಳು ನಡೆಯುತ್ತಿವೆ.

ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಬದ್ಧತೆಯ ಈಡೇರಿಕೆಗೆ ರೋಜ್‌ಗಾರ್ ಮೇಳ ಒಂದು ಹೆಜ್ಜೆಯಾಗಿದೆ ಎಂದು ಸರಕಾರಿ ಮೂಲಗಳು ತಿಳಿಸಿವೆ.

ರೋಜ್‌ಗಾರ್ ಮೇಳವು ಮತ್ತಷ್ಟು ಉದ್ಯೋಗ ಸೃಷ್ಟಿಯಲ್ಲಿ ವೇಗವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ ಹಾಗೂ  ಯುವಜನರಿಗೆ ಅವರ ಸಬಲೀಕರಣ ಮತ್ತು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ಭಾಗವಹಿಸುವಿಕೆಗೆ ಅರ್ಥಪೂರ್ಣ ಅವಕಾಶಗಳನ್ನು ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ.

Similar News