ನಿರೀಕ್ಷೆಯಂತೆ ಡಿಕೆಶಿಯೇ ಮುಖ್ಯಮಂತ್ರಿಯಾಗಬೇಕು: ಸಂಸದ ಡಿ.ಕೆ ಸುರೇಶ್
Update: 2023-05-16 13:30 IST
ನವದೆಹಲಿ: ನನ್ನ ಅಣ್ಣ, ಬಹಳಷ್ಟು ಕಷ್ಟ ಪಟ್ಟಿದ್ದಾರೆ. ಹಾಗಾಗಿ ಅವರೇ ಸಿಎಂ ಆಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಹೋದರ ಸಂಸದ ಡಿ.ಕೆ ಸುರೇಶ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ತೀರ್ಮಾನ ಪಕ್ಷದ ವರಿಷ್ಟರು ತೆಗೆದುಕೊಳ್ಳುತ್ತಾರೆ. ಒಟ್ಟಾರೆ ನಮ್ಮ ಜವಾಬ್ದಾರಿ ಕಾಂಗ್ರೆಸ್ ಪಕ್ಷವನ್ನ ಅಧಿಕಾರಕ್ಕೆ ತರುವುದಾಗಿತ್ತು. ಆ ಕೆಲಸವನ್ನು ಸಂಕಷ್ಟ ಸಮಯದಲ್ಲೂ ಸಹ ನಾವು ಮಾಡಿದ್ದೇವೆ ಎಂದು ಹೇಳಿದರು.
ಸೋನಿಯಾ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆಯವರಿಗೆ ಮಾತು ಕೊಟ್ಟಂತೆ ಡಿಕೆಶಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಪಕ್ಷ ಸಂಕಷ್ಟದಲ್ಲಿ ಇದ್ದ ಸಂದರ್ಭದಲ್ಲಿ ಸತತವಾಗಿ 3 ವರ್ಷಗಳ ಕಾಲ ಪಕ್ಷ ಸಂಘಟನೆ ಮಾಡಿದ್ದಾರೆ. ನನ್ನ ನಿರೀಕ್ಷೆ ಪ್ರಕಾರ ಅವರೇ ಸಿಎಂ ಆಗಬೇಕು ಎಂದು ಡಿ.ಕೆ ಸುರೇಶ್ ಹೇಳಿದ್ದಾರೆ.