ನಾಳೆ (ಮೇ 17) ಬೆಂಗಳೂರಿನಲ್ಲೇ ನೂತನ ಮುಖ್ಯಮಂತ್ರಿ ಹೆಸರು ಘೋಷಣೆ ಸಾಧ್ಯತೆ

Update: 2023-05-16 14:04 GMT

ಹೊಸದಿಲ್ಲಿ: ನೂತನ ಮುಖ್ಯಮಂತ್ರಿ ಆಯ್ಕೆ ಬಗ್ಗೆ  ಚರ್ಚಿಸಲು ವರಿಷ್ಠರ ಕರೆ ಹಿನ್ನೆಲೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ತೆರಳಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಪ್ರತ್ಯೇಕವಾಗಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇಬ್ಬರೂ ನಾಯಕರು ತಮಗೆ ಸಿಎಂ ಹುದ್ದೆ ಸಿಗಬೇಕು ಎಂದು ಪಟ್ಟು ಹಿಡಿದಿದ್ದಾರೆ. 

ಇನ್ನು ಮಲ್ಲಿಕಾರ್ಜುನ ಖರ್ಗೆ ಅವರು ರಾಹುಲ್ ಅವರ ಬಳಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದು, ನಾಳೆ (ಬುಧವಾರ) ಬೆಂಗಳೂರಿನಲ್ಲಿ ಕರ್ನಾಟಕ ಕಾಂಗ್ರೆಸ್ ನ ನೂತನ ಶಾಸಕಾಂಗ ಪಕ್ಷದ ನಾಯಕನ ಹೆಸರು ಘೋಷಣೆ ಮಾಡುವ ಸಾಧ್ಯತೆ ಎಂದು ತಿಳಿದು ಬಂದಿದೆ. 

Similar News