×
Ad

ಗೃಹ ರಕ್ಷಕ ಹುದ್ದೆಗೆ ಅರ್ಜಿ ಆಹ್ವಾನ

Update: 2023-05-16 19:59 IST

ಮಂಗಳೂರು, ಮೇ 16: ದ.ಕ.ಜಿಲ್ಲಾ ಗೃಹರಕ್ಷಕ ದಳದಿಂದ ಗೃಹರಕ್ಷಕರ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ವಾಹನ ಚಾಲನಾ ಪರವಾನಗಿ ಪಡೆದಿರುವ ಪುರುಷ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಎಸೆಸೆಲ್ಸಿ ಉತ್ತೀರ್ಣರಾಗಿರುವ ಹಾಗೂ 19 ವರ್ಷ ಪ್ರಾಯದಿಂದ 50 ವರ್ಷದೊಳಗಿನ ಅಭ್ಯರ್ಥಿಗಳು ‘ಸಮಾದೇಷ್ಟರು, ಜಿಲ್ಲಾ ಗೃಹರಕ್ಷಕದಳ, ಮೇರಿಹಿಲ್, ಮಂಗಳೂರು ಇಲ್ಲಿಂದ ಅರ್ಜಿ ಪಡೆದು 2023ರ ಜೂನ್ 15ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ: 0824-2220562ನ್ನು ಸಂಪರ್ಕಿಸಬಹುದು ಎಂದು ಸಮಾದೇಷ್ಟ  ಡಾ. ಮುರುಲಿ ಮೋಹನ್ ಚೂಂತಾರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Similar News