×
Ad

ಮಾಲೂರು ಕ್ಷೇತ್ರದ ಮತಗಳ ಮರುಎಣಿಕೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ

Update: 2023-05-16 20:57 IST

ಬೆಂಗಳೂರು, ಮೇ 16: ಮಾಲೂರು ಕ್ಷೇತ್ರದ ಮತಗಳ ಮರುಎಣಿಕೆ ಕೋರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದಾರೆ. 

248 ಮತಗಳ ಅಂತರದಿಂದ ಕಾಂಗ್ರೆಸ್‍ನ ಕೆ.ವೈ.ನಂಜೇಗೌಡ ಗೆಲುವು ಸಾಧಿಸಿದ ಹಿನ್ನೆಲೆ ಮರುಎಣಿಕೆಗೆ ನಿರ್ದೇಶನ ನೀಡುವಂತೆ ಕೋರಿ ಮಂಜುನಾಥಗೌಡ ಮನವಿ ಮಾಡಿದ್ದಾರೆ. 

ಇದನ್ನೂ ಓದಿ: 16 ಮತಗಳಿಂದ ಗೆದ್ದು ಸೋತ ಸೌಮ್ಯಾರೆಡ್ಡಿ; ಅದೇ ಹೆಸರಿನ ಪಕ್ಷೇತರ ಅಭ್ಯರ್ಥಿಗೆ ಸಿಕ್ಕ ಮತಗಳೆಷ್ಟು ಗೊತ್ತೇ?

ಕಾಂಗ್ರೆಸ್‍ನ ಕೆ.ವೈ.ನಂಜೇಗೌಡ ಕೇವಲ 248 ಮತಗಳ ಅಂತರದಲ್ಲಿ ಜಯಗಳಿಸುವ ಮೂಲಕ ಕುತೂಹಲಕ್ಕೆ ತೆರೆ ಬಿದ್ದಿತ್ತು. ಆದರೆ, ಸ್ಥಳಕ್ಕೆ ಬಂದ ಬಿಜೆಪಿ ಅಭ್ಯರ್ಥಿ ಕೆ.ಎಸ್.ಮಂಜುನಾಥಗೌಡ ಗೆಲುವಿನ ವಿರುದ್ದ ಪ್ರತಿಭಟಿಸಿ ಮರು ಎಣಿಕೆಗೆ ಆಗ್ರಹಿಸಿದ್ದರು. ಈ ವೇಳೆ ಮರು ಎಣಿಕೆ ಮಾಡಿದರಾದರೂ ಬಿಜೆಪಿ ಅಭ್ಯರ್ಥಿ ಕೋರ್ಟ್‍ನ ಮೊರೆ ಹೋಗುವುದಾಗಿ ಹೇಳಿದ್ದರು. ಅದರಂತೆಯೇ ಈಗ ಮಂಜುನಾಥಗೌಡ ಪರ ವಕೀಲರು ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದಾರೆ.

Similar News